Home ಅಪರಾಧ ಲೋಕ ಧರ್ಮಸ್ಥಳ; ಗಿರೀಶ್ ಮಟ್ಟಣ್ಣನವರ್ ವಿರುದ್ದ ಮತ್ತೊಂದು ಪ್ರಕರಣ ದಾಖಲು:ಪೊಲೀಸರಿಂದ ನೋಟೀಸ್ ಜಾರಿ

ಧರ್ಮಸ್ಥಳ; ಗಿರೀಶ್ ಮಟ್ಟಣ್ಣನವರ್ ವಿರುದ್ದ ಮತ್ತೊಂದು ಪ್ರಕರಣ ದಾಖಲು:ಪೊಲೀಸರಿಂದ ನೋಟೀಸ್ ಜಾರಿ

0
2

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಮಾನಿಹಾನಿಕರ ಪೋಸ್ಟ್ ಗಳನ್ನು ಹಾಕಿರುವ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸಾಮಾಜಿಕ ಮಾಧ್ಯಮ ಇನ್ಟ್ರಾ ಗ್ರಾಂ ನಲ್ಲಿ ಸತ್ಯಕ್ಕೆ ದೂರವಾದ ಗಂಭೀರ ಆರೋಪಗಳನ್ನು ಮಾಡುವ ಮೂಲಕ ಡಾ.ಹೆಗ್ಗಡೆಯವರ ವ್ಯಕ್ತಿತ್ವಕ್ಕೆ ಕುಂದುತರುವ ಪ್ರಯತ್ನ ನಡೆಸಿ ಸಮಾಜದಲ್ಲಿ ಅವರ ಸ್ಥಾನಮಾನಕ್ಕೆ ಹಾನಿಯುಂಟು ಮಾಡುವ ಪ್ರಯತ್ನ ನಡೆಸಿದ್ದಲ್ಲದೆ ಸಮಾಜದಲ್ಲಿ ವೈರತ್ವ ದ್ವೇಷ ವೈಮನಸ್ಸು ಉಂಟುಮಾಡಲು ಪ್ರಯತ್ನಿಸಿದ ಬಗ್ಗೆ ಧರ್ಮಸ್ಥಳ ನಿವಾಸಿ ಸುಬ್ರಹ್ಮಣ್ಯ ಪ್ರಸಾದ್ ಅವರು ನೀಡಿದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಎ.18 ರಂದು BNS-2023 (u/s-353(2))ಅಂತೆ ಪ್ರಕರಣ‌ ದಾಖಲಿಸಿ ತನಿಖೆ ನಡೆಯುತ್ತಿದೆ.

ತನಿಖೆಗೆ ಹಾಜರಾಗಲು ನೋಟೀಸ್ ಜಾರಿ:
ಎಸ್ಐಟಿ ಕಚೇರಿಗೆ ಮೇ.7 ರಂದು ಗಿರೀಶ್ ಮಟ್ಟಣ್ಣವರ್ ಹಾಜರಾಗಿರುವ ಬಗ್ಗೆ ಮಾಹಿತಿ ಪಡೆದ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ ಆರ್ ಗಾಣಿಗೇರ ನೇರವಾಗಿ ಎಸ್ಐಟಿ ಕಚೇರಿಗೆ ತೆರಳಿ ನೋಟೀಸ್ ಸ್ವೀಕರಿಸಿದ ಒಂದು ವಾರದೊಳಗೆ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರಾಗುವಂತೆ ಗಿರೀಶ್ ಮಟ್ಟಣ್ಣವರ್ ಅವರಿಗೆ ನೋಟೀಸ್ ಜಾರಿ ಮಾಡಲಾಗಿದೆ.

NO COMMENTS

LEAVE A REPLY

Please enter your comment!
Please enter your name here