ಬೆಳ್ತಂಗಡಿ : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾದ ಕಳ್ಳತನ ಪ್ರಕರಣ ಕಲಂ, 454,380,511 ಜೊತೆಗೆ 34 ಐಪಿಸಿಯಲ್ಲಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿದ ವಾರಂಟ್ ಆರೋಪಿ ನೆಲ್ಯಾಡಿಯ ಸತೀಶ್ @ ಸ್ಕೋರ್ಪಿಯಾ ಸತೀಶ್(35) ಎಂಬಾತನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ.
ಈತನ ಮೇಲೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ,
ವೇಣೂರ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರಕರಣ,ಪೂತ್ತೂರು ನಗರ ಠಾಣೆಯಲ್ಲಿ ಒಂದು ಪ್ರಕರಣ,
ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಒಂದು ಪ್ರಕರಣ ದಾಖಲಾಗಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುತ್ತದೆ.
ಬೆಳ್ತಂಗಡಿ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ರೋಹಿಣಿ ಸಿ ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದ ಧರ್ಮಸ್ಥಳ ಸಬ್ ಇನ್ಸ್‌ಪೆಕ್ಟರ್ ಸಮರ್ಥ್, ಬೆಳ್ತಂಗಡಿ ಸಬ್ ಇನ್ಸ್‌ಪೆಕ್ಟರ್ ಸಿಕಂದರ್ ಪಾಷ ರವರ ತಂಡದ ಸಿಬ್ಬಂದಿ ಧರ್ಮಸ್ಥಳ ಠಾಣೆಯ ವೃಷಭ, ಚರಣ್ ರಾಜ್, ಬೆಳ್ತಂಗಡಿ ಠಾಣೆಯ ಸಿಬ್ಬಂದಿ ಮುನಿಯ ನಾಯ್ಕ ರವರು ನೆಲ್ಯಾಡಿ ಎಂಬಲ್ಲಿಂದ ಮೇ.4 ಬಂಧಿಸಿ ಸಿಬ್ಬಂದಿ ಶಶಿಕುಮಾರ್ ಮತ್ತು ಚರಣ್ ರಾಜ್ ರವರ ಮುಖೇನ ಬೆಳ್ತಂಗಡಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
