Home ರಾಜಕೀಯ ಸಮಾಚಾರ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿಗೆ ಒಲವು ಹೊಂದಿರುವ ಕುಟುಂಬಗಳು ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಅರಣ್ಯ ಸಚಿವರ...

ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿಗೆ ಒಲವು ಹೊಂದಿರುವ ಕುಟುಂಬಗಳು ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಅರಣ್ಯ ಸಚಿವರ ಬೇಟಿ

2
0

ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ವಾಸವಾಗಿರುವ 9 ಕುಟುಂಗಳು ಸ್ವಯಂ ಪ್ರೇರಿತ ಪುನರ್ವಸತಿಗೆ ಒಲವು ಹೊಂದಿದ್ದು. ಈಗಾಗಲೇ ಕಡತಗಳು ಸಿದ್ಧಪಡಿಸಿ ಅಂದಾಜು ಮೊತ್ತವನ್ನು ಸರ್ಕಾರಕ್ಕೆ ಸಲ್ಲಿಸಿರುತ್ತಾರೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯವರ ಸಮಕ್ಷಮದಲ್ಲಿ ಮುಕ್ತಾಯದ ಹಂತಕ್ಕೆ ಬಂದಿರುತ್ತದೆ. ಈ ಬಗ್ಗೆ
ಸ್ವಯಂ ಪ್ರೇರಿತ ಪುನರ್ವಸತಿಗೆ ಒಲವು. ಹೊಂದಿರುವ ಕುಟುಂಬಗಳು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ, ರಕ್ಷಿತ್ ಶಿವರಾಂ ನೇತೃತ್ವದಲ್ಲಿ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿ ಮಲವಂತಿಗೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ ವಾಸವಾಗಿರುವ 9 ಕುಟುಂಭಗಳ ಪುನರ್ವಸತಿಗೆ,ಅಂದಾಜು ಮೊತ್ತ 10 ಕೋಟಿ ರೂಪಾಯಿ ಅನುದಾನವನ್ನು ಮಂಜೂರು ಗೊಳಿಸುವಂತೆ ಮನವಿಯನ್ನು ಸಲ್ಲಿಸಲಾಯಿತು. ಮನವಿಗೆ ಸಚಿವರು ಪೂರಕವಾಗಿ ಸ್ಪಂದಿಸಿದರು ಈ ಸಂದರ್ಭದಲ್ಲಿ.
ಕರ್ನಾಟಕ ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಶಾಲೆಟ್ ಪಿಂಟೊ,
ಮಲವಂತಿಗೆ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಕೆ ಯು ಮೊಹಮ್ಮದ್, ಫಲಾನುಭವಿಗಳಾದ ಸಂತೋಷ್ ಗೌಡ, ನಾರಾಯಣ
ಮಲೆಕುಡಿಯ, ಬಾಲಕೃಷ್ಣ ಮಲೆಕುಡಿಯ, ಹರೀಶ್ ಮಲೆಕುಡಿಯ, ಪುರಂದರ ಗೌಡ ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here