Home ರಾಜಕೀಯ ಸಮಾಚಾರ ಧರ್ಮಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

ಧರ್ಮಸ್ಥಳಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

2
0

ಧರ್ಮಸ್ಥಳ;
ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರು ತಮ್ಮ ಕುಟುಂಬ ಸದಸ್ಯರೊಂದಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ, ಶ್ರೀ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಹಾಗೂ ಸೇವೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅವರು ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿ ವಿ. ಹೆಗ್ಗಡೆ ಅವರ ಆಶೀರ್ವಾದ ಪಡೆದರು.

ಭೇಟಿಯ ವೇಳೆ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ, ವಿಧಾನಪರಿಷತ್ ಸದಸ್ಯರಾದ ಪ್ರತಾಪ್‌ಸಿಂಹ ನಾಯಕ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here