ಬೆಳ್ತಂಗಡಿ: ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಮಂಗಳವಾರ ಧರ್ಮಸ್ಥಳಕ್ಕೆ ಆಗಮಿಸಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಸೌಹಾರ್ದಯುತ ಮಾತುಕತೆ ನಡೆಸಿದರು.
ಸಚಿವರನ್ನು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಗೌರವಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್ ಗೌಡ ಹಾಗೂ ಇತರರು ಇದ್ದರು.
ಬಳಿಕ ದೇವರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸದ ಸಚಿವರು ಭೋಜನದ ಬಳಿಕ ಸುಬ್ರಹ್ಮಣ್ಯಕ್ಕೆ ಪ್ರಯಾಣಿಸಿದರು.







