ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಗೆ ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಾಜ್ಞಾನ ಸಚಿವರಾದ ಶ್ರೀ ಎನ್ ಎಸ್ ಬೋಸರಾಜ್ ರವರು ಭೇಟಿ ನೀಡಿ ಕಾರ್ಯಕರ್ತರ ಅಹವಾಲು ಮತ್ತು ಮನವಿಗಳನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿ ಅಧ್ಯಕ್ಷರಾದ ಕೆ ಎಂ ನಾಗೇಶ್ ಕುಮಾರ್ ಗೌಡ, ಜಿಲ್ಲಾ ಗ್ಯಾರೆಂಟಿ ಯೋಜನೆಗಳ ಉಪಾಧ್ಯಕ್ಷರಾದ ಶೇಖರ್ ಕುಕ್ಕೇಡಿ, ಪ್ರಮುಖರಾದ ಪ್ರವೀಣ್ ಹಳ್ಳಿಮನೆ, ಅಝರ್ ನಾವುರು ದಯಾನಂದ ಬೆಳಾಲ್, ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷರು ಬೂತ್ ಸಮಿತಿಯ ಅಧ್ಯಕ್ಷರು, ಕಾರ್ಯಕರ್ತರು ಉಪಸ್ಥಿತರಿದ್ದರು.
