ಬೆಳ್ತಂಗಡಿ; ತಾಲೂಕಿನ ರೆಖ್ಯ ಗ್ರಾಮದ ದೇವಸದ ಸಮೀಪ ಸಂಬಂಧಿಕರ ಮನೆಗೆ ಆಗಮಿಸಿದ್ದ ವ್ಯಕ್ತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ನಾಪತ್ತೆಯಾದವರನ್ನು ನೆಲ್ಯಾಡಿ ಪಾಲೇತ್ತಾಡಿ ನಿವಾಸಿ ಅಶ್ಚಿತ್ ಕುಮಾರ್ (37) ಎಂದು ಗುರುತಿಸಲಾಗಿದೆ.
ಅಶ್ವಿತ್ ಕುಮಾರ್ ಅವರು ಮೇ 17ರಂದು ಸಂಜೆ ಸುಮಾರು 4.15ರ ವೇಳೆಗೆ ಮನೆಯಿಂದ ಹೊರಗೆ ತೆರಳಿದ್ದು, ಬಳಿಕ ಮರಳಿ ಬಾರದೆ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಆತಂಕಗೊಂಡ ಕುಟುಂಬಸ್ಥರು ಸ್ಥಳೀಯರ ಸಹಕಾರದೊಂದಿಗೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ತೀವ್ರ ಹುಡುಕಾಟ ನಡೆಸಿದ್ದಾರೆ.
ಘಟನೆಯ ಮಾಹಿತಿ ತಿಳಿದು ಶೌರ್ಯ ವಿಪತ್ತು ನಿರ್ವಹಣಾ ತಂಡ ಕೂಡ ಕಾರ್ಯಾಚರಣೆಗೆ ಇಳಿದು ವಿವಿಧ ಪ್ರದೇಶಗಳಲ್ಲಿ ಶೋಧ ಕಾರ್ಯ ಮುಂದುವರಿಸಿದೆ.
ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು ಪ್ರಕರಣ ದಾಖಲಾಗಿದ್ದು, ನಾಪತ್ತೆಯಾದ ಅಶ್ವಿತ್ ಕುಮಾರ್ ಅವರ ಪತ್ತೆಗೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
