ಬೆಳ್ತಂಗಡಿ; ತಾಲೂಕಿನ ಗೇರುಕಟ್ಟೆ ನಿವಾಸಿ ವ್ಯಕ್ತಿಯೊಬ್ಬ ಹೋರಿ ಹಾಯ್ದು ಗಾಯಗೊಂಡು ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಆರೋಗ್ಯ ಹದಗೆಟ್ಟ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದರೂ ಫಲಕಾರಿಯಾಗದೆ ಬುಧವಾರ ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು ಈ ಬಗ್ಗೆ ಉಪ್ಪಿನಂಗಡಿ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ವಿದೆ ಎಂದು ಆರೋಪಿಸಿ ಮೃತನ ಮನೆಯವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಪ್ರಕರಣ ದಾಖಲಿಸಲಾಗಿದೆ
ಗೇರುಕಟ್ಟೆಯಲ್ಲಿ ರಸ್ತೆ ಬದಿ ವ್ಯಾಪಾರ ಮಾಡುತ್ತಿದ್ದ ಮೊಹಮ್ಮದ್ ಶರೀಫ್ (35) ಎಂಬತನೇ ಮೃತ ವ್ಯಕ್ತಿಯಾಗಿದ್ದಾರೆ.
ಈತನ ಮೇಲೆ ಮೇ 14 ರಂದು ಮನೆಯಲ್ಲಿ ಹೋರಿ ಹಾಯ್ದು ಗಾಯಗೊಂಡಿದ್ದಾನೆ ಕೂಡಲೇ ಇವರನ್ನು ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ ಸದ್ರಿ ಆಸ್ಪತ್ರೆಯ ವೈದ್ಯರು ನಿರ್ಲಕ್ಷ್ಯ ದಿಂದ ಚಿಕಿತ್ಸೆ ನೀಡಿದ್ದರಿಂದ ಗಾಯಾಳು ಮಹಮ್ಮದ್ ಶರೀಫ್ ಅವರ ಆರೋಗ್ಯ ಪರಿಸ್ಥಿತಿ ಹದಗೆಟ್ಟಿದ್ದು ಬಳಿಕ ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರು ಅಲ್ಲಿ ಚಿಕಿತ್ಸೆ ನೀಡಿದರೂ ಅವರು ಚಿಕಿತ್ಸೆಗೆ ಸ್ಪಂದಿಸಿದೆ ಮಂಗಳೂರಿನ ಆಸ್ಪತ್ರೆಯಲ್ಲಿ ಮೇ 20 ರಂದು ಮೃತಪಟ್ಟಿದ್ದಾರೆ ಉಪ್ಪಿನಂಗಡಿಯ ಖಾಸಗಿ ಆಸ್ಪತ್ರೆಯ ಅನಾಸ್ತೆಯಿಂದಾಗಿ ಇವರು ಮೃತಪಟ್ಟಿದ್ದಾರೆ ಎಂದು ಮೃತನ ಸಹೋದರ ನಾಸಿರುದ್ದೀನ್ ಅವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಅದರಂತೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕಲಂ 194(3)(4)ರಂತೆ ಪ್ರಕರಣ ದಾಖಲಿಸಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಸದ್ರಿ ಪ್ರಕರಣದಲ್ಲಿ ವೈದ್ಯರ ನಿರ್ಲಕ್ಷದ ಬಗ್ಗೆ ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ಈ ಆರೋಪಗಳ ಬಗ್ಗೆ ಪರಿಶೀಲಿಸಿ ವರದಿ ನೀಡಲು ವೈದ್ಯಕೀಯ ತಂಡವನ್ನು ರಚಿಸುವಂತೆ ಸಂಬಂಧ ಪಟ್ಟ ಇಲಾಖೆಯೊಂದಿಗೆ ಕೇಳಿಕೊಳ್ಳಲಾಗಿದ್ದುವರದಿ ಬಂದ ಬಳಿಕ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಮಾಹಿತಿ ನೀಡಿದ್ದಾರೆ.
ತಜ್ಞ ವೈದ್ಯರಿಂದ ಮರಣೋತ್ತರ ಪರೀಕ್ಷೆ; ಮೃತರ ಮರಣೋತ್ತರ ಪರೀಕ್ಷೆಯನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ತಜ್ಞ ವೈದ್ಯರಿಂದ ನಡೆಸಲಾಗಿದ್ದು ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ಮರಣಕ್ಕೆ ಕಾರಣವೇನು ಎಂಬ ಬಗ್ಗೆ ಸ್ಪಷ್ಟವಾದ ಮಾಹಿತಿಗಳು ಲಭ್ಯವಾಗಲಿದೆ.








