Home ಅಪರಾಧ ಲೋಕ ಬೆಳ್ತಂಗಡಿ : ಹಳೆ ದ್ವೇಷ  ಮನೆಗೆ ನುಗ್ಗಿ ಕತ್ತಿಯಿಂದ ಕಡಿದು ಮಹಿಳೆ ಕೊಲೆ ಯತ್ನ; ಆರೋಪಿಯ...

ಬೆಳ್ತಂಗಡಿ : ಹಳೆ ದ್ವೇಷ  ಮನೆಗೆ ನುಗ್ಗಿ ಕತ್ತಿಯಿಂದ ಕಡಿದು ಮಹಿಳೆ ಕೊಲೆ ಯತ್ನ; ಆರೋಪಿಯ ಬಂಧನ

0
2

ಬೆಳ್ತಂಗಡಿ : ಹಳೆ ದ್ವೇಷವನ್ನು ಇಟ್ಟುಕೊಂಡು ಅತ್ತೆ ಮನೆಗೆ ಹೋಗಿ ಅವಾಚ್ಯ ಶಬ್ದಗಳಿಂದ ಬೈದು ಬಳಿಕ ಕತ್ತಿಯಿಂದ ಕಡಿದು ಕೊಲೆಗೆ ಯತ್ನಿಸಿದ ಪ್ರಕರಣ ಆರಂಬೋಡಿ ಗ್ರಾಮದ ದೇಲೋಡಿಯಲ್ಲಿ ನಡೆದಿದ್ದು ಪ್ರಕರಣದ‌ ಆರೋಪಿ ಪ್ರಸನ್ನ ಕುಮಾರ್ (33) ಎಂಬಾತನನ್ನು ವೇಣೂರು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಕರಣದ ವಿವರ:

ಆರೋಪಿ ಪ್ರಸನ್ನ ಕುಮಾರ್ ದೂರುದಾರ ಸುಜಾತ ಅವರ ಗಂಡನ ತಮ್ಮನಾಗಿದ್ದು ಈತ ಸುಜಾತ ಹಾಗೂ ಆಕೆಯ ತಾಯಿಯದಿಗೆ ಪೂರ್ವ ದ್ವೇಷ ಹೊಂದಿದ್ದು ಆಗಾಗ ತಾಯಿ ಮಗಳಿಗೆ ನಿಮ್ಮನ್ನು ಕೊಲೆ ಮಾಡುವುದಾಗಿ ಹೇಳುತ್ತಿದ್ದು. ಇದೇ ವಿಚಾರದಲ್ಲಿ ಪೂರ್ವ ದ್ವೇಷ ಹೊಂದಿ ಮೇ.19 ರಂದು ಮದ್ಯಾಹ್ನ ಸುಮಾರು 12:45 ಗಂಟೆಯಿಂದ 1 ಗಂಟೆಯ ಅವಧಿಯಲ್ಲಿ ಬೆಳ್ತಂಗಡಿ ತಾಲೂಕು ಆರಂಬೋಡಿ ಗ್ರಾಮದ ದೆಲೋಡಿ ಯ ದೂರುದಾರರ ಮನೆಗೆ ಅಕ್ರಮ ಪ್ರವೇಶ ಮಾಡಿ ಮಾರಕ ಆಯುಧವಾದ ಉದ್ದನೆಯ ಕತ್ತಿಯನ್ನು ಹಿಡಿದು ದೂರುದಾರರ ತಾಯಿಯನ್ನು ಉದ್ದೇಶಿಸಿ ಅವ್ಯಾಚ ಶಬ್ದಗಳಿಂದ ಬೈದು ನಿನ್ನನ್ನು ಕೊಲ್ಲದೆ ಬಿಡುವುದಿಲ್ಲ ಎಂದು ಹೇಳಿ ಕತ್ತಿಯಿಂದ ತಲೆಗೆ, ಮುಖಕ್ಕೆ, ಕೈಕಾಲುಗಳಿಗೆ ಕಡಿದು ತೀವ್ರ ಹಲ್ಲೆ ನಡೆಸಿದ್ದು ಗಂಭೀರವಾಗಿ ಗಾಯಹಗೊಂಡ ಇವರನ್ನು ಮೂಡಬಿದ್ರೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ವೇಣೂರು ಪೊಲೀಸ್ ಠಾಣೆಯಲ್ಲಿ ಹಲ್ಲೆಗೊಳಾಗದ ಮಹಿಳೆಯ ಮಗಳು ನೀಡಿದ ದೂರಿನ ಮೇರೆಗೆ ಮೇ.19 ರಂದು BNS
-2023(329(4),352,118(2),109) ಅಡಿಯಲ್ಲಿ ಪ್ರಕರಣ ದಾಖಲಿಸಿ ಕೊಂಡಿದ್ದು ಬೆಳ್ತಂಗಡಿ ಉಪವಿಭಾಗ ಡಿವೈಎಸ್ಪಿ ರೋಹಿನಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ.ಬಿ.ಎಸ್ ನೇತೃತ್ವದ ವೇಣೂರು ಸಬ್ ಇನ್ಸ್‌ಪೆಕ್ಟರ್ ಅಕ್ಷಯ್ ಡವಗಿ ತಂಡ ಆರೋಪಿ ಹೊಸಂಗಡಿ ನಿವಾಸಿ ಪ್ರಸನ್ನ ಕುಮಾರ್(33) ಎಂಬಾತನನ್ನು ಖಚಿತ ಮಾಹಿತಿ ಮೇರೆಗೆ ವೇಣೂರಿನ ಕುರ್ಲೊಟ್ಟು ಜಂಕ್ಷನ್ ನಲ್ಲಿ ಮೇ.20 ರಂದು ವಶಕ್ಕೆ ಪಡೆದಿದ್ದು ವಿಚಾರಣೆ ನಡೆಸುತ್ತಿದ್ದಾರೆ.

NO COMMENTS

LEAVE A REPLY

Please enter your comment!
Please enter your name here