Home ಅಪಘಾತ ಬೆಳ್ತಂಗಡಿ; ಕಾರು ಬೈಕ್ ನಡುವೆ ಅಪಘಾತ ಯುವ ಫೋಟೋ ಗ್ರಾಫರ್ ಮೃತ್ಯು

ಬೆಳ್ತಂಗಡಿ; ಕಾರು ಬೈಕ್ ನಡುವೆ ಅಪಘಾತ ಯುವ ಫೋಟೋ ಗ್ರಾಫರ್ ಮೃತ್ಯು

0
2

ಬೆಳ್ತಂಗಡಿ: ಕಾರು ಮತ್ತು ಬೈಕ್ ನಡುವೆ ಸೋಮಂತಡ್ಕ ಅಗರಿ ಕ್ರಾಸ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭಿರವಾಗಿ ಗಾಯಗೊಂಡಿದ್ದ ಯುವ ಪೋಟೋಗ್ರಾಫ‌ರ್ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.

ಬೆಳ್ತಂಗಡಿ ತಾಲೂಕಿನ ಕಳೆಂಜ ಅಶ್ವಥಡಿ ಮನೆಯ ನಿವಾಸಿ ನೋಣಯ್ಯ ಗೌಡ ಅವರ ಪುತ್ರ, ಯುವ ಪೋಟೋಗ್ರಾಫ‌ರ್ ಗಣೇಶ್ ಗೌಡ (36ವ ) ಮೃತ ವ್ಯಕ್ತಿಯಾಗಿದ್ದಾರೆ.
ಇವರು ಮೇ 24 ರಂದು ಉಜಿರೆಯಿಂದ ಕಕ್ಕಿಂಜೆ ಕಡೆಗೆ ಬೈಕ್ ನಲ್ಲಿ ಹೋಗುತ್ತಿದ್ದ ವೇಳೆ ಎದುರಿನಿಂದ‌ ಬಂದ ಕಾರಿಗೆ ಡಿಕ್ಕಿಹೊಡೆದಿದ್ದು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದರು ಕೂಡಲೇ ಅವರನ್ನು ಮಂಗಳೂರಿನ ಆಸ್ಪತ್ರೆಗೆ ಕೊಂಡೊಯ್ದು ಚಿಕಿತ್ಸೆ ನೀಡಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತ ಪಟ್ಟಿದ್ದಾರೆ. ಬೆಳ್ತಂಗಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ‌ ದಾಖಲಿಸಲಾಗಿದೆ

NO COMMENTS

LEAVE A REPLY

Please enter your comment!
Please enter your name here