ಬೆಳ್ತಂಗಡಿ : ವೃದ್ಧರೊಬ್ಬರು ಮನೆಯ ಹಿಂಬಾಗದ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಕಡಿರುದ್ಯಾವರದಲ್ಲಿ ನಡೆದಿದೆ.
ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಎರ್ಮಾಲ್ ಪಲ್ಕೆ ನಿವಾಸಿ ಕರಿಯ(63) ಎಂಬವರು ಮೇ.26 ರಂದು ಬೆಳಗ್ಗೆ ಮನೆಯಲ್ಲಿ ಯಾರು ಇಲ್ಲದ ವೇಳೆ ತನ್ನ ಮನೆಯ ಹಿಂಭಾಗದ ಮರಕ್ಕೆ ನೈಲಾನ್ ಹಗ್ಗದಿಂದ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಬೆಳ್ತಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.
