Home ಶಾಲಾ ಕಾಲೇಜು ಎಸ್‌ಎಸ್‌ಎಲ್‌ಸಿ ಪರೀಕ್ಷೆ–2: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅನನ್ಯ 625 ಅಂಕಗಳೊಂದಿಗೆ ರಾಜ್ಯಕ್ಕೆ...

ಎಸ್‌ಎಸ್‌ಎಲ್‌ಸಿ ಪರೀಕ್ಷೆ–2: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಅನನ್ಯ 625 ಅಂಕಗಳೊಂದಿಗೆ ರಾಜ್ಯಕ್ಕೆ ಪ್ರಥಮ ಸ್ಥಾನ

5
0

ಬೆಳ್ತಂಗಡಿ; 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ–2ರ ಫಲಿತಾಂಶದಲ್ಲಿ ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿನಿ ಅನನ್ಯ ಅವರು 625 ಅಂಕಗಳಿಗೆ 625 ಅಂಕಗಳನ್ನು ಗಳಿಸುವ ಮೂಲಕ ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದು ಅಪೂರ್ವ ಸಾಧನೆ ಮೆರೆದಿದ್ದಾರೆ.

ಉಜಿರೆಯ ಸೂರ್ಯ ನಿವಾಸಿಗಳಾದ ಹರ್ಷದ್ರ ಕುಮಾರ್ ಹಾಗೂ ಶಾರದಾ ದಂಪತಿಗಳ ಪುತ್ರಿಯಾಗಿರುವ ಅನನ್ಯ, ತಮ್ಮ ನಿರಂತರ ಪರಿಶ್ರಮ, ಶಿಸ್ತುಬದ್ಧ ಅಧ್ಯಯನ, ಪ್ರತಿಭೆ ಹಾಗೂ ಶಿಕ್ಷಕರ ಸಮರ್ಪಕ ಮಾರ್ಗದರ್ಶನದ ಮೂಲಕ ಈ ಅಮೋಘ ಸಾಧನೆಯನ್ನು ದಾಖಲಿಸಿದ್ದಾರೆ.

ವಿದ್ಯಾರ್ಥಿನಿಯ ಈ ಸಾಧನೆಗೆ ಶಾಲೆಯ ಸಂಚಾಲಕರು, ಪ್ರಾಂಶುಪಾಲರು, ಶಿಕ್ಷಕ ವೃಂದ, ಆಡಳಿತ ಮಂಡಳಿಯ ಸದಸ್ಯರು, ಪೋಷಕರು ಹಾಗೂ ಹಳೆಯ ವಿದ್ಯಾರ್ಥಿಗಳು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ. 

LEAVE A REPLY

Please enter your comment!
Please enter your name here