ಬೆಳ್ತಂಗಡಿ: 2026ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-2ರ ಫಲಿತಾಂಶದಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಪ್ರಾಪ್ತಿ ಗೌಡ ಅವರು 625ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ.
ಅತ್ಯುತ್ತಮ ಸಾಧನೆ ಮೂಲಕ ಶಾಲೆಗೆ ಹಾಗೂ ತಾಲೂಕಿಗೆ ಕೀರ್ತಿ ತಂದಿರುವ ಪ್ರಾಪ್ತಿ ಗೌಡ ಅವರ ಸಾಧನೆಯನ್ನು ವಾಣಿ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.







