Home ಅಪರಾಧ ಲೋಕ ಗುರುವಾಯನಕೆರಯಲ್ಲಿ ವ್ಯಕ್ತಿಯ ಕೊಲೆ ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

ಗುರುವಾಯನಕೆರಯಲ್ಲಿ ವ್ಯಕ್ತಿಯ ಕೊಲೆ ಮೂವರು ಆರೋಪಿಗಳು ಪೊಲೀಸ್ ವಶಕ್ಕೆ

0
2

ಬೆಳ್ತಂಗಡಿ: ಗುರುವಾಯನಕೆರೆ ಯಲ್ಲಿ ಅಸಹಜ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾದ ಪ್ರಕರಣ ಒಂದು ಕೊಲೆ ಪ್ರಕರಣ ಎಂಬುದು ಪೊಲೀಸ್ ತನಿಖೆಯಲ್ಲಿ ಬಹಿರಂಗಗೊಂಡಿದ್ದು ಯತೀಶ್ ನನ್ನು ಕೊಲೆ ಮಾಡಿದ ಮೂವರು ಆರೋಪಿಗಳನ್ನು ಬೆಳ್ತಂಗಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕೊಲೆ ಪ್ರಕರಣದ ಆರೋಪಿಗಳು ಯಶೋಧರ (35), ಕಡಬ ಚಾರ್ವಾಕ ನಿವಾಸಿ ಮೋಹನ್ (30) ಹಾಗೂ ಬೆಳ್ತಂಗಡಿ ಪಡಂಗಡಿ ನಿವಾಸಿ ಇಬ್ರಾಹಿಂ (54) ಎಂಬವರಾಗಿದ್ದಾರೆ

ದಿನಾಂಕ: 01-06-2026 ರಂದು ಬೆಳಿಗ್ಗೆ, ಬಂಟ್ವಾಳ ತಾಲೂಕಿನ ಪೆರ್ನೆ ನಿವಾಸಿ ಯತೀಶ್ ಎಂಬಾತನ ಮೃತದೇಹ ಬೆಳ್ತಂಗಡಿ ಗುರುವಾಯನಕೆರೆ, ಅಲಾದಿಕೊಟ್ಟಿಗೆ ಎಂಬಲ್ಲಿ ಪತ್ರೆಯಾಗಿತ್ತು.
ಘಟನೆಯ ಬಗ್ಗೆ ತನಿಖೆ ಆರಂಭಿಸಿದ ಬೆಳ್ತಂಗಡಿ ಪೊಲೀಸರು
ಸ್ಥಳದಲ್ಲಿರುವ ಸಿಸಿಟಿವಿಗಳನ್ನು ಪರಿಶೀಲಿಸಿದಾಗ, ದಿನಾಂಕ: 01-06-2026 ರಂದು ಬೆಳಿಗ್ಗಿನ ಸಮಯ ಯತೀಶನಿಗೆ ಬೆಳ್ತಂಗಡಿ ಮಿತ್ತಬಾಗಿಲು ನಿವಾಸಿ ಯಶೋಧರ (35), ಕಡಬ ಚಾರ್ವಾಕ ನಿವಾಸಿ ಮೋಹನ್ (30) ಹಾಗೂ ಬೆಳ್ತಂಗಡಿ ಪಡಂಗಡಿ ನಿವಾಸಿ ಇಬ್ರಾಹಿಂ (54) ಎಂಬವರುಗಳು ಹಲ್ಲೆ ಮಾಡುತ್ತಿರುವುದು ಕಂಡುಬಂದಿದ್ದು, ಆರೋಪಿಗಳ ಹಲ್ಲೆಯಿಂದಾಗಿ ಸದ್ರಿ ಯತೀಶನು ಮೃತಪಟ್ಟಿರುವುದಾಗಿ ಅನುಮಾನಿಸಲಾಗಿದ್ದು ಪೊಲೀಸರು ಕೂಡಲೇ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

NO COMMENTS

LEAVE A REPLY

Please enter your comment!
Please enter your name here