ಬೆಳ್ತಂಗಡಿ; ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ ಹರಿಪ್ರಸಾದ್ ಅವರನ್ನು ಪಕ್ಷದ ಹೈಕಮಾಂಡ್ ನೇಮಕ ಮಾಡಿದೆ.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಈ ಬಗ್ಗೆ ಅಧಿಕೃತ ಆದೇಶ ಹೊರಡಿಸಿದ್ದಾರೆ. ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಹಿನ್ನಲೆಯಲ್ಲಿ ತೆರವಾದ ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಬಿ.ಕೆ ಹರಿಪ್ರಸಾದ್ ಅವರು ತುಂಬಲಿದ್ದಾರೆ.










