Home ಅಪರಾಧ ಲೋಕ ಬಂಟ್ವಾಳ ಎಂಡಿಎಂಎ ಸಾಗಾಟ ಪ್ರಕರಣ ಮೂವರ ಬಂಧನ; 7.6 ಮೌಲ್ಯದ ಮಾದಕವಸ್ತು ವಶಕ್ಕೆ

ಬಂಟ್ವಾಳ ಎಂಡಿಎಂಎ ಸಾಗಾಟ ಪ್ರಕರಣ ಮೂವರ ಬಂಧನ; 7.6 ಮೌಲ್ಯದ ಮಾದಕವಸ್ತು ವಶಕ್ಕೆ

0

ಬಂಟ್ವಾಳ; ಎಂ.ಡಿ.ಎಂ.ಎ ಸಾಗಾಟ ಪ್ರಕರಣ ಕ್ಕೆ ಸಂಬಂಧಿಸಿತೆ ಬಂಟ್ವಾಳ ನಗರ ಪೊಲೀಸ್ ಠಾಣೆಯ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ 7,64,000 ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಟ್ವಾಳ ಪುದು ನಿವಾಸಿ ಎ,ಜುಬೈರ್ (39), ಬಂಟ್ವಾಳ ಸಜಿಪ ಮುನ್ನೂರು ನಿವಾಸಿ ಮೊಹಮ್ಮದ್ ಸವಾದ್ (36) ಹಾಗೂ ಬಂಟ್ವಾಳ ಬಿ ಮೂಡ ನಿವಾಸಿ ಬಿ.ಎಮ್.ರಶೀದ್ ಯಾನೆ ಮಾರಿಮುತ್ತು ಬಂಧಿತರು.

ದಿನಾಂಕ 04.06.2026ರಂದು ಸಂಜೆ, ಬಂಟ್ವಾಳ ನಗರ ಪೊಲೀಸ್ ಠಾಣಾ ಪೊಲೀಸ್ ಉಪ ನಿರೀಕ್ಷಕರಾದ ಸಂದೀಪ್ ಕುಮಾರ್ ಶೆಟ್ಟಿರವರು ಠಾಣಾ ಸಿಬ್ಬಂದಿಯೊಂದಿಗೆ ಮೆಲ್ಕಾರ್ ಪ್ರೈಒವರ್ ಬಳಿ ಕಾರೊಂದನ್ನು ತಪಾಸಣೆಗಾಗಿ ನಿಲ್ಲಿಸಿದ್ದು, ಆ ಕಾರಿನಲ್ಲಿ ಚಾಲಕ ಹಾಗೂ ಇಬ್ಬರು ಪ್ರಯಾಣಿಕರಿದ್ದರು. ಕಾರನ್ನು ಪರಿಶೀಲಿಸಿದಾಗ ಮನೋದ್ರೇಕಕಾರಿ ವಸ್ತು ಸೇವನೆ ಮಾಡಲು ಬಳಸುವ ಸಾಧನ ಕಂಡುಬಂದಿದ್ದು, ಈ ಬಗ್ಗೆ ಅವರನ್ನು ವಿಚಾರಿಸಿದಾಗ ತಾವುಗಳು ಎಂ.ಡಿ,ಎಂ,ಎ ಎಂಬ ಮಾದಕದ್ರವ್ಯವನ್ನು ಹೆಚ್ಚಿನ ಬೆಲೆಗೆ ಮಾರಾಟ ಮಾಡುವ ಉದ್ದೇಶದಿಂದ ಸಾಗಿಸುತ್ತಿರುವುದಾಗಿ ತಿಳಿಸಿದ್ದು, ತಪಾಸಣೆ ನಡೆಸಿದಾಗ ಆರೋಪಿಗಳ ಬಳಿ ಹಾಗೂ ಕಾರಿನಲ್ಲಿ ಅಂದಾಜು ರೂ 7,64,000-/ ಮೌಲ್ಯದ ಎಂ.ಡಿ.ಎಂ.ಎ ಮಾದಕದ್ರವ್ಯ ಹಾಗೂ ಮಾದಕ ವಸ್ತು ಸೇವನೆ ಮಾಡಲು ಉಪಯೋಗಿಸುವ ಸಾಧನ ಪತ್ತೆಯಾಗಿರುತ್ತದೆ. ಆರೋಪಿಗಳ ಬಳಿ ಇದ್ದ ಮೂರು ಮೊಬೈಲ್ ಫೋನ್ ಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಕ್ಕೆ ಪಡೆಯಲಾಗಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version