ಬೆಳ್ತಂಗಡಿ : ನ್ಯಾಯಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಯಶವಂತ.ಎಸ್.ಕೆ(50) ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಈತ ಕಳೆದ ಎರಡು ವರ್ಷಗಳಿಂದ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ವಾರಂಟ್ ಆರೋಪಿಯಾಗಿದ್ದ.
ಬೆಳ್ತಂಗಡಿ ಪೊಲೀಸ್ ಉಪವಿಭಾಗದ ಡಿವೈಎಸ್ಪಿ ರೋಹಿಣಿ.ಸಿ.ಕೆ, ವೃತ್ತ ನಿರೀಕ್ಷಕ ರವಿ.ಬಿ.ಎಸ್ , ಸಬ್ ಇನ್ಸ್‌ಪೆಕ್ಟರ್ ಆನಂದ್.ಎಮ್ ಮತ್ತು ಸಿಕಂದರ್ ಪಾಷಾ ರವರ ಮಾರ್ಗದರ್ಶನದಲ್ಲಿ ಸಿಬ್ಬಂದಿ ಮಾಲತೇಶ್ ಹಾಗು ಚೌಡಪ್ಪ ತಂಡ ಸುಳ್ಯ ತಾಲೂಕಿನ ಮರ್ಕಂಜ ಎಂಬಲ್ಲಿ ಜೂ.4 ರಂದು ಸಂಜೆ ಬಂಧಿಸಿ ಬೆಳ್ತಂಗಡಿ ನ್ಯಾಯಲಯಕ್ಕೆ ಜೂ.5 ರಂದು ಹಾಜರುಪಡಿಸಿದ್ದು, ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಈತನ ವಿರುದ್ಧ ಕಾರ್ಕಳ, ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣಗಳು ದಾಖಲಾಗಿ ತನಿಖೆಯಲ್ಲಿದೆ.










