ಬೆಳ್ತಂಗಡಿ: ಶಿವಮೊಗ್ಗ ನಗರದ ಹೊಸಮನೆ ದೊಡ್ಡಮ್ಮ ದೇವಸ್ಥಾನದ ಸಮೀಪ ಕ್ರೇನ್‌ಗೆ ಸಿಲುಕಿ ಕೂಲಿ ಕಾರ್ಮಿಕರೊಬ್ಬರು ಮೃತಪಟ್ಟ ದುರ್ಘಟನೆ ಜೂ.6ರಂದು ಸಂಜೆ ನಡೆದಿದೆ.
ಮೃತರನ್ನು ಬೆಳ್ತಂಗಡಿ ತಾಲ್ಲೂಕಿನ ಪಿಲಿಗೂಡು ನಿವಾಸಿ ನಾಗೇಶ್ (48) ಎಂದು ಗುರುತಿಸಲಾಗಿದೆ.
ನಾಗೇಶ್ ಅವರು ದೇವಸ್ಥಾನದ ಗೋಪುರದ ಕಾಮಗಾರಿಯಲ್ಲಿ ಕೆಲಸ ನಿರ್ವಹಿಸಲು ಶುಕ್ರವಾರ ಶಿವಮೊಗ್ಗಕ್ಕೆ ಬಂದಿದ್ದರು. ಕೆಲಸ ಮಾಡುವ ವೇಳೆ ಎಡವಿ ಬಿದ್ದ ಇವರು ಕ್ರೇನ್‌ಗೆ ಸಿಕ್ಕಿ ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಕ್ರೇನ್ ಚಾಲಕನ ಅಜಾಗರೂಕತೆಯಿಂದ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಘಟನೆಯ ಬಗ್ಗೆ ಶಿವಮೊಗ್ಗ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.










