ಬೆಳ್ತಂಗಡಿ; ಎಕ್ಸೆಲ್ ಕಾಲೇಜಿನ ವಿದ್ಯಾರ್ಥಿಗಳು ಪ್ರಾರಂಭದ ದಿನಗಳಿಂದಲೂ ಪ್ರತಿ ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆ ಮಾಡುತ್ತಾ ಬರುತ್ತಿದ್ದು ಶೈಕ್ಷಣಿಕ ಸಾಧನೆಗೆ ಹಿಡಿದ ಕೈಕನ್ನಡಿಯಾಗಿದೆ.
ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಯಾನ ಪೊನ್ನಮ್ಮ 600 ಕ್ಕೆ 600ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ರಾಷ್ಟ್ರ ಮಟ್ಟದ ಜೆಇಇ ಪರೀಕ್ಷೆಯಲ್ಲಿ ಬುದ್ಧಿವಂತರ ಜಿಲ್ಲೆಯಾದ ನಮ್ಮ ಜಿಲ್ಲೆಗೆ ಪ್ರಥಮ ಸ್ಥಾನ, ಸಿಎಸ್ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ರ್ರಾಂಕ್, 12 ವಿದ್ಯಾರ್ಥಿಗಳ ಎನ್ ಡಿ ಎ ಆಯ್ಕೆ ಹೀಗೆ ಹಲವು ಸಾಧನೆಗಳ ನಡುವೆ ಈ ಬಾರಿಯು ಸಿಇಟಿ ಪರೀಕ್ಷೆಯಲ್ಲಿ ಅತ್ಯಧಿಕ ವಿದ್ಯಾರ್ಥಿಗಳು ಅತ್ಯುನ್ನತ ರಾಂಕ್ ನೊಂದಿಗೆ ಸರ್ವಶ್ರೇಷ್ಠ ಸಾಧನೆ ಮಾಡಿದ್ದಾರೆ. ಸಿಇಟಿಯಲ್ಲಿ ನಮ್ಮ ವಿದ್ಯಾರ್ಥಿಗಳ ಸಾಧನೆಗೆ ಅಭಿನಂದನೆಗಳು ಹಾಗೂ ನಮ್ಮ ಪರಿಣಿತ ಹಾಗೂ ಅನುಭವಿ ಬೋಧಕ ವೃಂದಕ್ಕೆ ವಂದನೆಗಳು ಎಂದು ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ರಾದ ಸುಮಂತ್ ಕುಮಾರ್ ಜೈನ್ ತಿಳಿಸಿದ್ದಾರೆ
