Home ಅಪಘಾತ ಮಚ್ಚಿನ ಪಿಕಪ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಇಬ್ಬರ ಸಾವು

ಮಚ್ಚಿನ ಪಿಕಪ್ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಇಬ್ಬರ ಸಾವು

0

ಬೆಳ್ತಂಗಡಿ; ಬಳ್ಳಮಂಜ – ಪಣಕಜೆ ರಸ್ತೆಯ ಪಾಲ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆಕ್ಟಿವಾದದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮೃತಪಟ್ಟ ಘಟನೆ ಸೋಮವಾರ ಸಂಜೆಯ ವೇಳೆ ಸಂಭವಿಸಿದೆ.

ಅಪಘಾತದಲ್ಲಿ ಆಕ್ಟಿವಾ ಸವಾರ ಡಾಕಯ್ಯ ಗೌಡ ಹಾಗೂ ಹಿಂಬದಿ ಸವಾರ ಚಂದಪ್ಪ ಮೂಲ್ಯ ಅವರು ಗಂಭೀರವಾಗಿ ಗಾಯಗೊಂಡು ಮೃತಪಟ್ಟ ವ್ಯಕ್ತಿಗಳಾಗಿದ್ದಾರೆ.

ಮಡಂತ್ಯಾರಿನ ‘ಎಸ್‌.ಎಂ ಶಾಮಿಯಾನ’ ಸಂಸ್ಥೆಗೆ ಸೇರಿದ ಪಿಕಪ್ ವಾಹನವು ಬಳ್ಳಮಂಜ ಕಡೆಯಿಂದ ಪಣಕಜೆ ಕಡೆಗೆ ತೆರಳುತ್ತಿತ್ತು. ಈ ವೇಳೆ ಪಣಕಜೆಯಿಂದ ಬಳ್ಳಮಂಜ ಕಡೆಗೆ ಬರುತ್ತಿದ್ದ ಆಕ್ಟಿವಾ ಸ್ಕೂಟರ್‌ಗೆ ಪಾಲ್ಯರ ಬಳಿ ಪಿಕಪ್ ವಾಹನವು ನೇರ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆಗೆ ಆಕ್ಟಿವಾ ಸಹ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು ಸವಾರ ಡಾಕಯ್ಯ ಗೌಡ ಅವರಿಗೂ ತಲೆಗೆ ತೀವ್ರ ಸ್ವರೂಪದ ಗಾಯಗಳಾಗಿದ್ದು, ಅವರನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿ ಆಗದೆ ಇವರು ಮೃತ ಪಟ್ಟಿದ್ದಾರೆ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲಬೆ ನಡೆಸುತ್ತಿದ್ದಾರೆ

NO COMMENTS

LEAVE A REPLY

Please enter your comment!
Please enter your name here

Exit mobile version