Home ಅಪರಾಧ ಲೋಕ ಧರ್ಮಸ್ಥಳ; ನೇತ್ರಾವತಿ ಸೇತುವೆಯ ಸಮೀಪ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ

ಧರ್ಮಸ್ಥಳ; ನೇತ್ರಾವತಿ ಸೇತುವೆಯ ಸಮೀಪ ಅಪರಿಚಿತ ವ್ಯಕ್ತಿಯ ಅಸ್ಥಿಪಂಜರ ಪತ್ತೆ

3
0

ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ನೇತ್ರಾವತಿ ಬ್ರಿಡ್ಜ್‌ ಬಳಿಯ ಅರಣ್ಯ ಪ್ರದೇಶದಲ್ಲಿ ಜೂ.9 ರಂದು ಬೆಳಗ್ಗೆ ಅಪರಿಚಿತ ಗಂಡಸಿನ ಅಸ್ಥಿಪಂಜರ ಹಾಗೂ ಬಟ್ಟೆಗಳು ಸಾರ್ವಜನಿಕರಿಗೆ ಪತ್ತೆಯಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಧರ್ಮಸ್ಥಳ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಬಳಿಕ ಮಂಗಳೂರು ಆಸ್ಪತ್ರೆಯ ವೈದ್ಯರು ಆಗಮಿಸಿ ಸ್ಥಳದಲ್ಲಿಯೇ ಶವಪರೀಕ್ಷೆ ಮಾಡಿ ಬಳಿಕ ಧರ್ಮಸ್ಥಳ ಗ್ರಾಮ ಪಂಚಾಯತ್ ನೇತೃತ್ವದಲ್ಲಿ ರುದ್ರ ಭೂಮಿಯಲ್ಲಿ ದಫನ ನಡೆಸಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here