ಬೆಳ್ತಂಗಡಿ; ಕುವೆಟ್ಟು ಗ್ರಾಮದ ಮದ್ದಡ್ಕ ಮಸೀದಿಯ ಬಳಿ ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತವಾದ ಘಟನೆ ಜೂ.11ರಂದು ಬೆಳಿಗ್ಗೆ ನಡೆದಿದೆ.
ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿದ್ದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರು ಬೆಳ್ತಂಗಡಿ ಕಡೆಯಿಂದ ಮಂಗಳೂರು ಕಡೆ ಸಾಗುತ್ತಿದ್ದು ಬೈಕ್ ಸವಾರರು ಮನೆಯಿಂದ ಹೊರಟು ರಸ್ತೆ ದಾಟುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಬೆಳ್ತಂಗಡಿ ಸಂಚಾರಿ ಪೋಲಿಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.
