ಬೆಳ್ತಂಗಡಿ : ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯ ಚಂದ್ರಶೇಖರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕು ಸಾರ್ವಜನಿಕ ಸರಕಾರಿ ಆಸ್ಪತ್ರೆಯಲ್ಲಿ ಕಳೆದ 25 ವರ್ಷಗಳಿಂದ ಔಷಧಿ ವಿಭಾಗದ ಮುಖ್ಯಸ್ಥನಾಗಿರುವ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ ಕೆದ್ದು ನಿವಾಸಿಯಾಗಿರುವ ಚಂದ್ರಶೇಖರ್ ತನ್ನ ಆಸ್ಪತ್ರೆಯ ಮಹಿಳಾ ಸಿಬ್ಬಂದಿಗೆ ಔಷಧಾಲಯದ ಉಗ್ರಾಣದಲ್ಲಿ ಲೈಂಗಿಕ ಕಿರುಕುಳ ಕೊಟ್ಟಿದ್ದು ಈ ಬಗ್ಗೆ ಯಾರಲ್ಲದ್ದರೂ ಹೇಳಿದ್ರೆ ಕೆಲಸದಿಂದ ತೆಗೆಯುವುದಾಗಿ ಪದೆ ಪದೆ ಬೆದರಿಕೆ ಹಾಕಿರುವುದಾಗಿ ದೌರ್ಜನ್ಯ ಕ್ಕೆ ಒಳಗಾದ ಮಹಿಳೆ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಜೂ.11 ರಂದು BNS-2023(u/s-75(3),79,351(2)) ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಚಂದ್ರಶೇಖರ್ ಗೆ ಇಲಾಖೆಯ ಮೇಲಾಧಿಕಾರಿಗಳ ಬೆಂಬಲವಿದೆ ಎನ್ನಲಾಗಿದೆ. ಅದಲ್ಲದೆ ಹಲವರು ಮಹಿಳೆಯರಿಗೆ ಈತ ಲೈಂಗಿಕ ಕಿರುಕುಳ ನೀಡಿದ್ದ ಎಂಬ ಆರೋಪವೂ ಕೂಡ ಕೇಳಿ ಬಂದಿದೆ. ಆದ್ರೆ ಭಯದಿಂದ ಮಾರ್ಯಾದೆಗೆ ಅಂಜಿ ಯಾರು ದೂರು ಕೊಡಲು ಮುಂದೆ ಬಂದಿರಲ್ಲಿಲ್ಲ. ಇದೀಗ ಆಸ್ಪತ್ರೆಯ ಸಿಬ್ಬಂದಿ ಧೈರ್ಯದಿಂದ ಲೈಂಗಿಕ ಕಿರುಕುಳವನ್ನು ಮನೆಯವರಿಗೆ ತಿಳಿಸಿ ದೂರು ಕೊಟ್ಟಿದ್ದು ಪೊಲೀಸರು ಪ್ರಕರಣದಬಗ್ಗೆ ತನಿಖೆ ನಡೆಸುತ್ತಿದ್ದಾರೆ.
