Home ಅಪರಾಧ ಲೋಕ ಬೆಳ್ತಂಗಡಿ; ಇಳಂತಿಲ ದರೋಡೆ ಪ್ರಕರಣ‌ ಇಬ್ಬರು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ

ಬೆಳ್ತಂಗಡಿ; ಇಳಂತಿಲ ದರೋಡೆ ಪ್ರಕರಣ‌ ಇಬ್ಬರು ಆರೋಪಿಗಳಿಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ

0

ಬೆಳ್ತಂಗಡಿ; ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಇಳಂತಿಲ ಎಂಬಲ್ಲಿ, 2023 ರ ಮಾರ್ಚ್ ನಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿತೆ ಆರೋಪಿಗಳಾದ ಬೆಳ್ತಂಗಡಿ ಇಳಂತಿಲ ನಿವಾಸಿ ರಾಜೀಮ್ ಹಾಗೂ ಕೊಕ್ಕಡ ನಿವಾಸಿ ಮುಸ್ತಫಾ ಅವರಿಗೆ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.
ಇಳಂತಿಲದಲ್ಲಿ ನಡೆದ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 34/2023 ಕಲಂ 392,216(A)IPC ಮತ್ತು 196,115r/w 190(2) IMV ACT ರಂತೆ ಪ್ರಕರಣ ದಾಖಲಾಗಿದ್ದು, ಸದ್ರಿ ಪ್ರಕರಣದ ತನಿಖೆ ನಡೆಸಿದ ಅಂದಿನ ವೃತ್ತ ನಿರೀಕ್ಷಕರಾಗಿದ್ದ ರವಿ ಬಿ.ಎಸ್ ರವರು ಅಗತ್ಯ ಸಾಕ್ಷಿಗಳನ್ನು ಕಲೆ ಹಾಕಿ, ಆರೋಪಿಗಳಾದ ಬೆಳ್ತಂಗಡಿ ಇಳಂತಿಲ ನಿವಾಸಿ ರಾಜೀಮ್ ಹಾಗೂ ಕೊಕ್ಕಡ ನಿವಾಸಿ ಮುಸ್ತಫಾ ಎಂಬವರುಗಳನ್ನು ಬಂಧಿಸಿ ಅವರ ವಿರುದ್ದ ಮಾನ್ಯ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಸದ್ರಿ ಪ್ರಕರಣದ ವಿಚಾರಣೆ ನಡೆಸಿದ ಬೆಳ್ತಂಗಡಿ ನ್ಯಾಯಾಲಯದ ಮಾನ್ಯ ಪಿ ಎಸ್ ಸಿ ಜೆ ಮತ್ತು ಜೆ ಎಂ ಎಫ್ ಸಿ ನ್ಯಾಯಾಲಯದ ಮಾನ್ಯ ನ್ಯಾಯಾಧೀಶರಾದ ಮನು ಬಿ.ಕೆ ರವರು, ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇಬ್ಬರು ಆರೋಪಿಗಳಿಗೂ ಕಲಂ 392,216(A)IPC ಮತ್ತು 196,115r/w 190(2) IMV ACT ಅಡಿಯಲ್ಲಿ ತಲಾ 10000 ರೂಪಾಯಿ ದಂಡ ಮತ್ತು 3 ವರ್ಷ ಸಾದಾ ಕಾರಾಗೃಹ ಶಿಕ್ಷೆ ನೀಡಿ ಅದೇಶಿಸಿರುತ್ತದೆ. ಸಹಾಯಕ ಸರ್ಕಾರಿ ಅಭಿಯೋಜಕರಾದ ದಿವ್ಯರಾಜ ಹೆಗ್ಡೆರವರು ಸಮರ್ಥವಾಗಿ ವಾದಮಂಡಿಸಿರುತ್ತಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version