Home ಅಪಘಾತ ಬೆಳ್ತಂಗಡಿ; ಮದ್ದಡ್ಕದಲ್ಲಿ  ಸರಣಿ ಅಪಘಾತ ಹಲವರಿಗೆ ಗಾಯ

ಬೆಳ್ತಂಗಡಿ; ಮದ್ದಡ್ಕದಲ್ಲಿ  ಸರಣಿ ಅಪಘಾತ ಹಲವರಿಗೆ ಗಾಯ

0

ಬೆಳ್ತಂಗಡಿ: ಕಾರುಗಳ ಹಾಗೂ ಬೈಕ್ ನಡುವೆ ನಡೆದ ಸರಣಿ ಅಪಘಾತದಲ್ಲಿ ಬೈಕ್‌ ಸವಾರ ಸೇರಿದಂತೆ ಹಲವರು ಗಾಯಗೊಂಡ ಘಟನೆ ಬುಧವಾರ ಮಧ್ಯಾಹ್ನ ಗುತುವಾಯನಕೆರೆ ಸಮೀಪ‌ ಮದ್ದಡ್ಕದಲ್ಲಿ ನಡೆದಿದೆ.

ಚಿಕ್ಕಮಗಳೂರು ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಮದ್ದಡ್ಕ ಎಂಬಲ್ಲಿ ಮಂಗಳೂರಿನಿಂದ ಬರುತಿದ್ದ ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಎದುರಿನಿಂದ ಬರುತಿದ್ದ ಕಾರು ಹಾಗೂ ಬೈಕಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಬೈಕ್ ಸವಾರ ರಸ್ತೆಗೆ ಎಸೆಯಲ್ಪಟ್ಟು ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಪಲ್ಟಿಯಾಗಿದೆ. ಮತ್ತೊಂದು ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಕಾರಿನಲ್ಲಿ ಇದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿರುವುದಾಗಿ ತಿಳಿದು ಬಂದಿದ್ದು
ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version