Home ರಾಜಕೀಯ ಸಮಾಚಾರ ವಿಧಾನ ಪರಿಷತ್ ಚುನಾವಣೆ ಬಿ.ಕೆ ಹರಿಪ್ರಸಾದ್ ಸೇರಿ ಕಾಂಗ್ರೆಸ್ ನ ಐವರು ಬಿಜೆಪಿಯ ಇಬ್ಬರ ಗೆಲುವು...

ವಿಧಾನ ಪರಿಷತ್ ಚುನಾವಣೆ ಬಿ.ಕೆ ಹರಿಪ್ರಸಾದ್ ಸೇರಿ ಕಾಂಗ್ರೆಸ್ ನ ಐವರು ಬಿಜೆಪಿಯ ಇಬ್ಬರ ಗೆಲುವು ಜೆಡಿಎಸ್ ಗೆ ಮುಖಭಂಗ

1
0

ಬೆಂಗಳೂರು : ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಏಳು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಐದು ಸ್ಥಾನ ಗಳನ್ನು ಗೆದ್ದುಕೊಂಡಿದೆ. ಬಿಜೆಪಿ ಎರಡು ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದು ಮೈತ್ರಕೂಟದಿಂದ ಕಣಕ್ಕೆ ಇಳಿದಿದ್ದ ಜೆಡಿಎಸ್ ಅಭ್ಯರ್ಥಿ ಸೋಲನ್ನು ಕಂಡಿದ್ದು ತೀವ್ರ ಹಿನ್ನಡೆಗೆ ಕಾರಣವಾಗಿದೆ.

ಕಾಂಗ್ರೆಸ್ ಅಭ್ಯರ್ಥಿಗಳಾದ ಬಿ.ಕೆ.ಹರಿಪ್ರಸಾದ್, ಬಿ.ಎಸ್.ಶಿವಣ್ಣ ತಿಪ್ಪಣ್ಣಪ್ಪ ಕಮಕನೂ‌ರ್, ಪಿ.ವಿ.ಮೋಹನ್, ವಿನಯ್ ಕಾರ್ತಿಕ್ ಹಾಗೂ ಬಿಜೆಪಿ ಅಭ್ಯರ್ಥಿಗಳಾದ ಲಿಂಗರಾಜ್ ಪಾಟೀಲ್, ರಘು ಕೌಟಿಲ್ಯ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಜೆಡಿಎಸ್ ಅಭ್ಯರ್ಥಿಯಾಗಿದ್ದ ಗೋವಿಂದರಾಜು ಸೋಲನ್ನು ಅನುಭವಿಸಿದ್ದಾರೆ.
ಕಣದಲ್ಲಿದ್ದ ಒಟ್ಟು ಎಂಟು ಅಭ್ಯರ್ಥಿಗಳ ಪೈಕಿ ಏಳು ಅಭ್ಯರ್ಥಿಗಳು ಜಯ ಸಾಧಿಸಿದ್ದು, ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಐದೂ ಅಭ್ಯರ್ಥಿಗಳು ಸುಲಭವಾಗಿ ಗೆದ್ದು ಬೀಗಿದ್ದಾರೆ. ಇತ್ತ ಬಿಜೆಪಿ ಮತ್ತು ಜೆಡಿಎಸ್‌ ಮೈತ್ರಿಕೂಟದಿಂದ ಕಣಕ್ಕಿಳಿದಿದ್ದ ಮೂವರು ಅಭ್ಯರ್ಥಿಗಳಲ್ಲಿ ಇಬ್ಬರು ಮಾತ್ರ ವಿಜಯಶಾಲಿಯಾಗಿದ್ದು, ಕಾಂಗ್ರೆಸ್‌ನ ಐದನೇ ಅಭ್ಯರ್ಥಿಯಾಗಿದ್ದ ವಿನಯ್ ಕಾರ್ತಿಕ್ ಎದುರು ಜೆಡಿಎಸ್‌ ಅಭ್ಯರ್ಥಿ ಗೋವಿಂದರಾಜು ಅವರು ಸೋಲನ್ನು ಕಂಡಿದ್ದಾರೆ. ಈ ಸೋಲಿನ ಮೂಲಕ ಜಂಟಿಯಾಗಿ ಅಖಾಡಕ್ಕಿಳಿದಿದ್ದ ಮೈತ್ರಿಕೂಟಕ್ಕೆ ಮುಖಭಂಗವಾಗಿದೆ.

ಗುರುವಾರ ವಿಧಾನಸೌಧದ ಮೊದಲನೆ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 106ರಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 4ರ ಮತದಾನ ನಡೆತ್ತು. ಚುನಾವಣೆಯಲ್ಲಿ ಅಡ್ಡಮತದಾನ ಆಗುವ ಭೀತಿ ಎದುರಾಗಿರುವುದರಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ತಮ್ಮ ಶಾಸಕರನ್ನು ರಕ್ಷಿಸಿಕೊಳ್ಳಲು ರೆಸಾರ್ಟ್ ರಾಜಕೀಯದ ಮೊರೆ ಹೋಗಿತ್ತು.

ಕಾಂಗ್ರೆಸ್

  1. ಬಿ.ಕೆ.ಹರಿಪ್ರಸಾದ್ 30
  2. ಪಿ ವಿ ಮೋಹನ್ – 29
  3. ಬಿಎಸ್ ಶಿವಣ್ಣ- 30
  4. ತಿಪ್ಪಣಪ್ಪ ಕಮಕನೂರ- 30
  5. ವಿನಯ್ ಕಾರ್ತಿಕ್- 32

ಬಿಜೆಪಿಯ

  1. ರಘು ಕೌಟಿಲ್ಯ- 29
  2. ಲಿಂಗರಾಜ ಪಾಟೀಲ್ 27

ಜೆಡಿಎಸ್

  1. ಗೋವಿಂದರಾಜು-14

LEAVE A REPLY

Please enter your comment!
Please enter your name here