ಬೆಳ್ತಂಗಡಿ: ಪತ್ನಿಯನ್ನು ಕೊಂದು ಪತಿಯೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಆಲಂಕಾರು ಕಜೆಯ ಬಾಡಿಗೆ ಮನೆಯೊಂದರಲ್ಲಿ ಜೂನ್ 20 ರಂದು ನಡೆದಿದೆ. ಅಪ್ಪ ಅಮ್ಮನನ್ನು ಕಳೆದುಕೊಂಡು 2 ವರ್ಷದ ಪುಟ್ಟ ಕಂದಮ್ಮ ಅನಾಥವಾಗಿದೆ. ಆಲಂಕಾರು ಪೇಟೆಯಲ್ಲಿ ಹೋಟೆಲ್ ನಡೆಸುತ್ತಿದ್ದ ಬಜಗೋಳಿಯ ನಿವಾಸಿಗಳಾಗಿರುವ ದಿನೇಶ್ ಹಾಗೂ ಸಿದ್ದಕಟ್ಟೆಯ ಸಂಗೀತಾ ಎಂಬವರೇ ಮೃತಪಟ್ಟವರಾಗಿದ್ದಾರೆ.
ಈ ದಂಪತಿ ಎರಡು ವರ್ಷದ ಹೆಣ್ಣು ಮಗುವಿನೊಂದಿಗೆ ಇಲ್ಲಿ ವಾಸವಾಗಿದ್ದರು. ಒಂದು ತಿಂಗಳ ಹಿಂದೆ ಆಲಂಕಾರು ಪೇಟೆಯ ಹೋಟೆಲ್ ಬಿಟ್ಟು ತೆರಳಿದ್ದ ಇವರು, ಜೂ.19ರ ಸಂಜೆ ಪುನಃ ಬಂದಿದ್ದರು. ಜೂ.20ರಂದು ಘಟನೆ ನಡೆದಿದ್ದು, ಮನೆಯ ಒಳಗಿನ ಚಿಲಕ ಹಾಕಲಾಗಿತ್ತು. ಎರಡು ವರ್ಷದ ಹೆಣ್ಣು ಮಗು ಅತ್ತು ಮತ್ತೆ ನಿದ್ದೆಗೆ ಜಾರಿತ್ತು ಎಂದು ಸ್ಥಳೀಯರು ಮಾಹಿತಿ ನೀಡುತ್ತಿದ್ದಾರೆ.
ದಿನೇಶ್ ಅವರ ಮೃತದೇಹ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಸಂಗೀತಾ ಅವರ ಮೃತದೇಹ ರಕ್ತದ ಮಡುವಿನಲ್ಲಿ ಬಿದ್ದಿತ್ತು. ಪತ್ನಿಯನ್ನು ಕೊಲೆಮಾಡಿ ದಿನೇಶ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಅನುಮಾನಿಸಲಾಗಿದೆ ಯಾವ ಕಾರಣಕ್ಕೆ ಇವರು ಈ ಕೃತ್ಯ ನಡೆದಿದೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ ಘಟನಾ ಸ್ಥಳಕ್ಕೆ ಕಡಬ ಪೊಲೀಸ್ ಉಪನಿರೀಕ್ಷಕ ಜಂಬುರಾಜ್ ಮಹಾಜನ್ ಮತ್ತು ಸಿಬ್ಬಂದಿಗಳು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.










