ಬೆಳ್ತಂಗಡಿ (ಜೂನ್-21): ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಪಕ್ಷದ 18ನೇ ಸಂಸ್ಥಾಪನಾ ದಿನದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮವನ್ನು ಪಕ್ಷದ ಕಚೇರಿ ಮುಂಭಾಗದಲ್ಲಿ ಕ್ಷೇತ್ರಾಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅವರ ನೇತೃತ್ವದಲ್ಲಿ ವಿಜೃಂಭಣೆಯಿಂದ ನಡೆಸಲಾಯಿತು.
“ಪರ್ಯಾಯ ರಾಜಕಾರಣದ ಸಕಾರಾತ್ಮಕ ಹೆಜ್ಜೆ” ಎಂಬ ಘೋಷವಾಕ್ಯದೊಂದಿಗೆ ನಡೆದ ಕಾರ್ಯಕ್ರಮದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಅಕ್ಬರ್ ಬೆಳ್ತಂಗಡಿ ಅವರು ಪಕ್ಷದ ಧ್ವಜಾರೋಹಣ ನೆರವೇರಿಸಿ, ಪಕ್ಷದ ಹೋರಾಟ, ಜನಸೇವೆ ಹಾಗೂ ಸಾಮಾಜಿಕ ನ್ಯಾಯಕ್ಕಾಗಿ ಕಳೆದ 18 ವರ್ಷಗಳಿಂದ ನಡೆಸಿಕೊಂಡು ಬಂದಿರುವ ಕಾರ್ಯಚಟುವಟಿಕೆಗಳನ್ನು ಸ್ಮರಿಸಿದರು.
ಕಾರ್ಯಕ್ರಮದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಸದಸ್ಯರಾದ ಅಬ್ದುಲ್ ಖಾದರ್ ನಾವೂರು ಅವರು ಸಂದೇಶ ಭಾಷಣ ಮಾಡಿ, ಪಕ್ಷದ ಬೆಳವಣಿಗೆಯಲ್ಲಿ ಕಾರ್ಯಕರ್ತರ ತ್ಯಾಗ, ಸಮರ್ಪಣೆ ಮತ್ತು ಜನರ ಬೆಂಬಲದ ಮಹತ್ವವನ್ನು ವಿವರಿಸಿದರು. ಮುಂದಿನ ದಿನಗಳಲ್ಲಿಯೂ ಜನಪರ ಹೋರಾಟಗಳು ಹಾಗೂ ಸಾಮಾಜಿಕ ನ್ಯಾಯದ ಪರವಾದ ಚಟುವಟಿಕೆಗಳನ್ನು ಇನ್ನಷ್ಟು ಬಲಪಡಿಸುವ ಸಂಕಲ್ಪವನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಕಾರ್ಯದರ್ಶಿ ರಶೀದ್ ಬೆಳ್ತಂಗಡಿ, ಕೋಶಾಧಿಕಾರಿ ಸ್ವಾಲಿ ಮದ್ದಡ್ಕ, ಸಮಿತಿ ಸದಸ್ಯರಾದ ಅಶ್ರಫ್ ಕಟ್ಟೆ, ಸಹಲ್ ನಿರ್ಸಾಲ್, ಲಾಯಿಲ ಬ್ಲಾಕ್ ಅಧ್ಯಕ್ಷರಾದ ಸಲೀಂ ಲಾಯಿಲ, ರಿಯಾಝ್ ಬೆಳ್ತಂಗಡಿ, ಸಾದಿಕ್ ಲಾಯಿಲ, ಬೆಳ್ತಂಗಡಿ ನಗರ ಸಮಿತಿ ಉಪಾಧ್ಯಕ್ಷರಾದ ಇಸ್ಮಾಯಿಲ್ ಬೆಳ್ತಂಗಡಿ, ಬಶೀರ್ ಬೆಳ್ತಂಗಡಿ ಹಾಗೂ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಹಿತೈಷಿಗಳು ಉಪಸ್ಥಿತರಿದ್ದರು.
ಹಾಗೆಯೇ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ನಾವೂರು, ಲಾಯಿಲ, ಸುನ್ನತ್‌ಕೆರೆ, ಮದ್ದಡ್ಕ, ಕುದ್ರಡ್ಕ, ಚಾರ್ಮಾಡಿ, ಪುಂಜಾಲಕಟ್ಟೆ, ಪಡ್ಡಂದಡ್ಕ, ಪೆರಾಡಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿಯೂ ಸಂಸ್ಥಾಪನಾ ದಿನದ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಈ ಕಾರ್ಯಕ್ರಮಗಳಲ್ಲಿ ಪಕ್ಷದ ಕ್ಷೇತ್ರ ಕಾರ್ಯದರ್ಶಿಗಳಾದ ಅಶ್ಫಾಕ್ ಪುಂಜಾಲಕಟ್ಟೆ, ಉಪಾಧ್ಯಕ್ಷರಾದ ನಿಸಾರ್ ಕುದ್ರಡ್ಕ, ಜಿಲ್ಲಾ ನಾಯಕರಾದ ಹನೀಫ್ ಪುಂಜಾಲಕಟ್ಟೆ, ರಹಮಾನ್ ನಾವೂರು, ಕಣಿಯೂರು ಬ್ಲಾಕ್ ಅಧ್ಯಕ್ಷರಾದ ಆಸೀಫ್ ಬಂಗೇರಕಟ್ಟೆ, ಲತೀಫ್ ಪುಂಜಾಲಕಟ್ಟೆ, ಪಕ್ಷದ ಕಾರ್ಯಕರ್ತರು, ಹಿತೈಷಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ಸಂಸ್ಥಾಪನಾ ದಿನವನ್ನು ಅರ್ಥಪೂರ್ಣವಾಗಿ ಆಚರಿಸಿದರು. ಪಕ್ಷದ ಮುಂದಿನ ಬೆಳವಣಿಗೆ ಮತ್ತು ಜನಸೇವೆಯ ಕಾರ್ಯಗಳಿಗೆ ಎಲ್ಲರೂ ಒಗ್ಗಟ್ಟಿನಿಂದ ಶ್ರಮಿಸುವ ಸಂಕಲ್ಪವನ್ನು ಈ ಸಂದರ್ಭದಲ್ಲಿ ಕೈಗೊಂಡರು.





