ಬೆಳ್ತಂಗಡಿ :ದೇಶದ ಸೈನ್ಯದಲ್ಲಿ 22 ವರ್ಷಗಳ ಕಾಲ ಅನನ್ಯ ಸೇವೆಗೈದು ನಿವೃತ್ತರಾದ ಮೊಗ್ರು ಗ್ರಾಮದ ಮುಗೇರಡ್ಕ ಬರೆಮೇಲು ನಿವಾಸಿ ಯೋಧ ಎ ಸಿ ಪಿ ಹವಾಲ್ದಾರ್ ದೇವಪ್ರಸಾದ್ ಗೌಡರವರಿಗೆ ಶ್ರೀ. ಕ್ಷೇ. ಧ. ಗ್ರಾ. ಯೋಜನೆ ಬಿ. ಸಿ ಟ್ರಸ್ಟ್ (ರಿ ) ಕಣಿಯೂರು ವಲಯದ ಮೊಗ್ರು ಒಕ್ಕೂಟದ ವತಿಯಿಂದ ಉಂತನಾಜೆ ಶ್ರೀ ಲಕ್ಷ್ಮಿ ನಾರಾಯಣ ಭಜನಾ ಮಂದಿರದ ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಮೊಗ್ರು ಒಕ್ಕೂಟದ ಅಧ್ಯಕ್ಷರಾದ ಶ್ರೀಯುತ ಗಂಗಾಧರ ಪೂಜಾರಿ, ಉಪಾಧ್ಯಕ್ಷರಾದ ಕೃಷ್ಣ ಬೆಳ್ಚಡ, ಕಾರ್ಯದರ್ಶಿ ನವೀನ್, ಕೋಶಾಧಿಕಾರಿ ಕಮಲ ಹಾಗೂ ಕಣಿಯೂರು ವಲಯದ ಮೇಲ್ವಿಚಾರಕರಾದ ವಿಶ್ವನಾಥ್, ಸೇವಾಪ್ರತಿನಿಧಿ ಚಂದ್ರಕಲಾ, ಸಿ ಎಸ್ ಸಿ ಸೇವಾದಾರೆ ಪೂರ್ಣಿಮಾ ಹಾಗೂ ಒಕ್ಕೂಟದ ಸದಸ್ಯರು ಉಪಸ್ಥಿತರಿದ್ದರು.










