Home ಅಪರಾಧ ಲೋಕ ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆ ಬೆಳಾಲು: ವಿದ್ಯಾರ್ಥಿ ಸಂಸತ್ ಉದ್ಘಾಟನೆ

ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆ ಬೆಳಾಲು: ವಿದ್ಯಾರ್ಥಿ ಸಂಸತ್ ಉದ್ಘಾಟನೆ

2
0


ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಗೌರವ ರಾಜ್ಯಪಾಲ, ಶಾಲಾ ಮುಖ್ಯೋಪಾಧ್ಯಾಯ ಜಯರಾಮ ಮಯ್ಯ ಕಾರ್ಯಕ್ರಮ ಉದ್ಘಾಟಿಸಿ ಪ್ರಮಾಣ ವಚನ ಬೋಧಿಸಿದರು.

ಬಳಿಕ ಅವರು ಮಾತನಾಡಿ, ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ತಿಳಿದುಕೊಳ್ಳಲು ಮತ್ತು ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿ ಸರ್ಕಾರ ಸಹಕಾರಿಯಾಗಿದೆ ಎಂದು ತಿಳಿಸಿದರು.

ವಿದ್ಯಾರ್ಥಿ ನಾಯಕ ಕಾರ್ತಿಕ್ ಎಂ.ಎನ್ ವಾರ್ಷಿಕ ಯೋಜನೆ ಮಂಡಿಸಿದರು.

ಶಿಕ್ಷಕ ಕಿರಣ್ ಕಾರ್ಯಕ್ರಮ ಸಂಘಟಿಸಿದರು. ಇತರ ಶಿಕ್ಷಕರು ಉಪಸ್ಥಿತರಿದ್ದರು.
ಉಪನಾಯಕ ರಕ್ಷಿತ್ ಸ್ವಾಗತಿಸಿ, ವಿರೋಧ ಪಕ್ಷದ ನಾಯಕಿ ನೇತ್ರಾವತಿ ವಂದಿಸಿದರು‌. ಕಾರ್ಯದರ್ಶಿ ಮಹಮ್ಮದ್ ಹಯನ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here