Home ಅಂಕಣಗಳು ಬೆಳ್ತಂಗಡಿ: ಒಕ್ಕಲಿಗ ಗೌಡರ ಯುವ ವೇದಿಕೆ ನೇತೃತ್ವದಲ್ಲಿ ಕೆಂಪೇಗೌಡ ಜಯಂತಿ

ಬೆಳ್ತಂಗಡಿ: ಒಕ್ಕಲಿಗ ಗೌಡರ ಯುವ ವೇದಿಕೆ ನೇತೃತ್ವದಲ್ಲಿ ಕೆಂಪೇಗೌಡ ಜಯಂತಿ

4
0

ಬೆಳ್ತಂಗಡಿ: ತಾಲೂಕು ಒಕ್ಕಲಿಗ ಗೌಡರ ಯುವ ವೇದಿಕೆಯ ನೇತೃತ್ವದಲ್ಲಿ, ವಿವಿಧ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಕೆಂಪೇಗೌಡ ಜಯಂತಿ ಆಚರಣೆ, ಬೃಹತ್ ರಕ್ತದಾನ ಶಿಬಿರ ಮತ್ತು ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಜೂ. 27ರಂದು ಲಾಯಿಲ ಸಂಗಮ ಸಭಾಭವನದಲ್ಲಿ ಯಶಸ್ವಿಯಾಗಿ ನಡೆಯಿತು.
ಲಾಯಿಲ ಪ್ರಸನ್ನ ಎಜ್ಯುಕೇಶನ್ ಟ್ರಸ್ಟ್
ಅಧ್ಯಕ್ಷ ಕೆ. ಗಂಗಾಧರ ಗೌಡ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಕೆಂಪೇಗೌಡರ ದೂರದೃಷ್ಟಿ ಸ್ಮರಿಸುವುದರ ಜೊತೆಗೆ ಸಮಾಜಮುಖಿ ಕಾರ್ಯಗಳ ಮೂಲಕ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಬೆಳ್ತಂಗಡಿ ಒಕ್ಕಲಿಗ ಗೌಡರ ಯುವ ವೇದಿಕೆ ಅಧ್ಯಕ್ಷ ಅನಿಲ್ ಕುಮಾ‌ರ್ ಅಂತರ ಅಧ್ಯಕ್ಷತೆ ವಹಿಸಿದ್ದರು.


ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಒಕ್ಕಲಿಗ ಗೌಡರ ಸಂಘ ಅಧ್ಯಕ್ಷ ಬಾಲಕೃಷ್ಣ ಗೌಡ ಕೇರಿಮಾರು, ಶ್ರೀ ಕಾಲಭೈರವೇಶ್ವರ ಸೌಹಾರ್ದ ಸಹಕಾರಿ ಅಧ್ಯಕ್ಷ ರಂಜನ್ ಜಿ. ಗೌಡ, ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ, ಸೇವಾ ಟ್ರಸ್ಟ್ ಅಧ್ಯಕ್ಷ ಮೋಹನ್ ಗೌಡ ಕಲ್ಮಂಜ, ವಿಜಯ ಗೌಡ ವೇಣೂರು ಉಪಸ್ಥಿತರಿದ್ದರು.

ಜಿಲ್ಲಾ ಒಕ್ಕಲಿಗ ಗೌಡರ ಸಂಘ ಕೋಶಾಧಿಕಾರಿ ಸೂರಜ್ ವಳಂಬ್ರ, ಮಹಿಳಾ ವೇದಿಕೆ ಅಧ್ಯಕ್ಷೆ ಅಪರ್ಣ ಶಿವಕಾಂತ ಗೌಡ, ಮಹಿಳಾ ಯುವ ವೇದಿಕೆ ಅಧ್ಯಕ್ಷೆ ಅನುಪಮ ಸತೀಶ್ ಗೌಡ, ಮಂಗಳೂರು ವೆನ್‌ಲಾಕ್ ಆಸ್ಪತ್ರೆಯ ಇ.ಎನ್‌.ಟಿ. ತಜ್ಞ ಡಾ. ವಿಶ್ವವಿಜೇತ್, ಕೆ.ಎಂ.ಸಿ. ಆಸ್ಪತ್ರೆ ವೈದ್ಯ ಸಂಕಲ್ಪ, ಮಾಜಿ ತಾ.ಪಂ. ಸದಸ್ಯೆ ಜಯಶೀಲಾ ಕುಶಾಲಪ್ಪ ಗೌಡ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ವೈದ್ಯಕೀಯ ಪದವಿ ಪಡೆದ
ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು. ಮಮತಾ ಶಿವರಾಮ್ ಪ್ರಾರ್ಥನೆಗೈದರು. ಜಿಲ್ಲಾ ಒಕ್ಕಲಿಗ ಗೌಡರ ಸಂಘದ ನಿರ್ದೇಶಕ ವಿಜಯ ಗೌಡ ವೇಣೂರು ಸ್ವಾಗತಿಸಿದರು. ನಿತಿನ್ ಗೌಡ ಸುರುಳಿ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here