Home ಅಪರಾಧ ಲೋಕ ಬೆಳ್ತಂಗಡಿ; ತಾಲೂಕು ಆಡಳಿತದಿಂದ ಕೆಂಪೇಗೌಡ ಜಯಂತಿ‌ ಆಚರಣೆ

ಬೆಳ್ತಂಗಡಿ; ತಾಲೂಕು ಆಡಳಿತದಿಂದ ಕೆಂಪೇಗೌಡ ಜಯಂತಿ‌ ಆಚರಣೆ

0

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ ಹಾಗೂ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ, ಬೆಳ್ತಂಗಡಿ ತಾಲೂಕು ಒಕ್ಕಲಿಗರ ಗೌಡರ ಸೇವಾ ಟ್ರಸ್ಟ್, ತಾಲೂಕು ಒಕ್ಕಲಿಗರ ಗೌಡರ ಯುವ ವೇದಿಕೆ ಮತ್ತು ಮಹಿಳಾ ವೇದಿಕೆ ಇವರ ಸಹಭಾಗಿತ್ವದಲ್ಲಿ ಕೆಂಪೇಗೌಡ ಜಯಂತಿ ಆಚರಣೆ ಜೂ.27 ರಂದು ಬೆಳ್ತಂಗಡಿ ಸಿವಿಸಿ ಹಾಲ್ ನಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಎಂ.ಪಿ ಶ್ರೀನಾಥ್, ಬೆಳ್ತಂಗಡಿ ತಾಲೂಕು ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷ ಬಾಲಕೃಷ್ಣ ಕೇರಿಮಾರ್, ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಧ್ಯಕ್ಷ ಮೋಹನ್‌ ಗೌಡ ಕಲ್ಮಂಜ, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಕೆ ಹಾಗೂ ಇಲಾಖೆಯ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಉಪಸ್ಥಿತರಿದ್ದರು.

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಕನ್ನಡ ಸಹ ಪ್ರಾಧ್ಯಾಪಕ ದಿವಾಕರ ಕೆ ಕೆಂಪೇಗೌಡರು ಬೆಂಗಳೂರಿಗೆ ನೀಡಿದಂತಹ ಕೊಡುಗೆಯ ಬಗ್ಗೆ ಮಾತನಾಡಿದರು. ತಾಲೂಕು ಕಚೇರಿಯ ವಿಷಯ ನಿರ್ವಾಹಕ ಪರಮೇಶ್ವರ್ ಕಾರ್ಯಕ್ರಮ ಆಯೋಜನೆ ಮಾಡಿದರು, ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್ ಸ್ವಾಗತಿಸಿ, ಸಮಾಜ ಕಲ್ಯಾಣ ಇಲಾಖೆಯ ಸಿಬ್ಬಂದಿ ಹೇಮಲತಾ ಕಾರ್ಯಕ್ರಮ ನಿರೂಪಿಸಿ, ತಾಲೂಕು ಪಂಚಾಯತ್ ಸಂಯೋಜಕ ಜಯಾನಂದ ಧನ್ಯವಾದವಿತ್ತರು.

NO COMMENTS

LEAVE A REPLY

Please enter your comment!
Please enter your name here

Exit mobile version