Home ಅಪರಾಧ ಲೋಕ ಬೆಳ್ತಂಗಡಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಪರಾರಿಯಾಗಿದ್ದ ಮತ್ತೋರ್ವ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನ...

ಬೆಳ್ತಂಗಡಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಪರಾರಿಯಾಗಿದ್ದ ಮತ್ತೋರ್ವ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನ ಬಂಧನ

0

ಬೆಳ್ತಂಗಡಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪರಾರಿಯಾಗಿದ್ದ ಮತ್ತೋರ್ವ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನನ್ನು ವೇಣೂರು ಪೊಲೀಸರು ಮೂಡಬಿದಿರೆ ಬಳಿ ಬಂಧಿಸಿದ್ದಾರೆ.

2023 ರಲ್ಲಿ ಸಂತ್ರಸ್ತ ಬಾಲಕಿ 5.6 ವರ್ಷದ ಸಂದರ್ಭ ಈ ಕೃತ್ಯ ನಡೆದಿದ್ದು ಸಂತ್ರಸ್ತ ಮಗುವಿನ ಸಂಬಂಧಿ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ ಹಾಗೂ ಸ್ಥಳೀಯ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕನ  ಜೊತೆಗೂಡಿ ಆಕೆಯ ಮೇಲೆ ಲೈಂಗಿಕವಾಗಿ ದೌರ್ಜನ್ಯ ಎಸಗಿದ್ದಾರೆ. ಆರೋಪಿಗಳಲ್ಲಿ ಕಾನೂನು ಸಂಘರ್ಷಕ್ಕೆ ಒಳಗಾದ ಓರ್ವ ಬಾಲಕನನ್ನು(16) ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನೋರ್ವ ಆರೋಪಿ ಕಾನೂನು ಸಂಘರ್ಷಕ್ಕೆ ಒಳಗಾದ ಬಾಲಕ (18) ಪರಾರಿಯಾಗಿದ್ದ ಎನ್ನಲಾಗುತ್ತಿದ್ದು ಆತನಿಗಾಗಿ ಪೊಲೀಸರು ಹುಡುಕಾಟ ನಡೆಸಿ ಮೂಡಬಿದಿರೆಯಲ್ಲಿ ವಶಕ್ಕೆ ಪಡೆದಿದ್ದಾರೆ.

ಸಂತ್ರಸ್ತೆಯ ತಾಯಿ ನೀಡಿದ ದೂರಿನಂತೆ ವೇಣೂರು ಪೊಲೀಸ್ ಠಾಣೆಯಲ್ಲಿ ಕಲಂ 376,376AB,376DB,506 ಜೊತೆಗೆ 34 IPC ಮತ್ತು ಕಲಂ 6 ಪೋಕ್ಸೋ ಕಾಯಿದೆ-2012 ರಂತೆ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ. ಬೆಳ್ತಂಗಡಿ ಉಪ ವಿಭಾಗದ ಡಿವೈಎಸ್ಪಿ ರೋಹಿಣಿ.ಸಿ.ಕೆ ಮಾರ್ಗದರ್ಶನದಲ್ಲಿ ಬೆಳ್ತಂಗಡಿ ವೃತ್ತ ನಿರೀಕ್ಷಕ ರವಿ ಬಿ.ಎಸ್ ನೇತೃತ್ವದ ವೇಣೂರು ಪೊಲೀಸ್ ಠಾಣೆಯ ಅಕ್ಷಯ್ ಡವಗಿ ತಂಡ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.

NO COMMENTS

LEAVE A REPLY

Please enter your comment!
Please enter your name here

Exit mobile version