Home ಅಪಘಾತ ಧರ್ಮಸ್ಥಳ ಕನ್ಯಾಡಿಯಲ್ಲಿ ಪಾದಾಚಾರಿಗೆ ಬಸ್ ಡಿಕ್ಕಿ ಗಂಭೀರ ಗಾಯ

ಧರ್ಮಸ್ಥಳ ಕನ್ಯಾಡಿಯಲ್ಲಿ ಪಾದಾಚಾರಿಗೆ ಬಸ್ ಡಿಕ್ಕಿ ಗಂಭೀರ ಗಾಯ

0

ಬೆಳ್ತಂಗಡಿ,: ಧರ್ಮಸ್ಥಳ ಗ್ರಾಮದ ಕನ್ಯಾಡಿ ಮಸೀದಿ ಬಳಿ ಜೂ. 30 ರ ರಾತ್ರಿ ವೇಳೆ ಪಾದಾಚಾರಿ ಯೊಬ್ಬರಿಗೆ ಕೆ.ಎಸ್.ಆರ್.ಟಿ.ಸಿ ಬಸ್ ಡಿಕ್ಕಿಹೊಡೆದು ಪಾದಾಚಾರಿ ಗಂಭೀರವಾಗಿ ಗಾಯಗೊಂಡ ಘಟನೆ ಸಂಭವಿಸಿದೆ.
ಉಜಿರೆಯಿಂದ ಧರ್ಮಸ್ಥಳ ಕಡೆಗೆ ಬರುತ್ತಿದ್ದ ಗ್ರಾಮಾಂತರ ಸಾರಿಗೆ, KA 19 F 3219 ಸಂಖ್ಯೆಯ ಸರ್ಕಾರಿ ಬಸ್ ಸರ್ಕಾರಿ ಬಸ್ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದಿದೆ.
ಪಾದಾಚಾರಿ ರಸ್ತೆಗೆ ಬಿದ್ದಿದ್ದು, ತಲೆಗೆ ಗಂಭೀರ ಗಾಯಗಳಾಗಿವೆ. ಗಾಯಾಳುವನ್ನು ತಕ್ಷಣ ಸ್ಥಳೀಯರ ಸಹಕಾರದೊಂದಿಗೆ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆ ವೇಳೆ ಭಾರೀ ಮಳೆ ಸುರಿಯುತ್ತಿತ್ತು. ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version