ಮಂಗಳೂರು, ಜು. 1: ನಗರದಲ್ಲಿ ಸುರಿಯುತ್ತಿರುವ ಭಾರೀ ಮಳೆಯ
ಪರಿಣಾಮ ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ನಾಗುರಿ ಪ್ರದೇಶದಲ್ಲಿ ಮನೆ ಮೇಲೆ ತಡೆಗೋಡೆ ಕುಸಿದು ಬಿದ್ದು ಹೆಂಚಿನ ಛಾವಣಿಯ ಮನೆ ಕುಸಿದ ಪರಿಣಾಮ ಮಹಿಳೆಯೊಬ್ಬರು ಹಾಗೂ ಇಬ್ಬರು ಬಾಲಕಿಯರು ಮೃತಪಟ್ಟಿದ್ದಾರೆ.
ಮನೆ ಕುಸಿದ ಸಂದರ್ಭದಲ್ಲಿ ಒಟ್ಟು ಆರು ಮಂದಿ ಅವಶೇಷಗಳಡಿ ಸಿಲುಕಿಕೊಂಡಿದ್ದರು. ಘಟನೆಯ ಬಳಿಕ ಕೈಗೊಂಡ ರಕ್ಷಣಾ ಕಾರ್ಯಾಚರಣೆಯಲ್ಲಿ ಒಬ್ಬ ಪುರುಷ ಹಾಗು ಇಬ್ಬರನ್ನು ಸುರಕ್ಷಿತವಾಗಿ ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದೇ ವೇಳೆ, ಅವಶೇಷಗಳಡಿ ಸಿಲುಕಿದ್ದ ಮಹಿಳೆಯೊಬ್ಬರು ಮತ್ತು ಇಬ್ಬರು ಬಾಲಕಿಯರನ್ನು ಹೊರತೆಗೆದಾಗ ಅವರು ಮೃತಪಟ್ಟಿರುವುದು ದೃಢಪಟ್ಟಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್ ತಂಡ ಸ್ಥಳಕ್ಕೆ ಆಗಮಿಸಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ಪೂರ್ಣಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಜಿಲ್ಲಾಧಿಕಾರಿ ದರ್ಶನ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
