ಬೆಳ್ತಂಗಡಿ : ಕಡಿರುದ್ಯಾವರ ಗ್ರಾಮದ ಮಠ ಸಮೀಪದ ಕುಂಭರೋಡಿ ನಿವಾಸಿ ಕಾಲೇಜು ವಿದ್ಯಾರ್ಥಿನಿ ನಿಖಿತಾ (19) ಎಂಬಾಕೆ ಜು.1 ರಂದು ಮನೆಯ ಸಮಿಪವಿರುವ ಮರಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಬೆಳ್ತಂಗಡಿಯ ಸರಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದ ಪದವಿ ತರಗತಿ ಓದುತ್ತಿದ್ದಳು. ಆತ್ಮಹತ್ಯೆಯ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ ಹೆಚ್ಚಿನ ಮಾಹಿತಿಗಳು ಇನ್ನಷ್ಟೆ ತಿಳಿದು ಬರಬೇಕಾಗಿದೆ.