ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಮ್ ವರ್ಗಾವಣೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ವಿಶೇಷ ತಹಶೀಲ್ದಾರ್ ಎಸ್. ಎನ್ ನರಗುಂದ ನೇಮಕವಾಗಿದ್ದರೆ.
ಕಳೆದ ಎರಡುವರೆ ವರ್ಷಗಳ ಕಾಲ ಬೆಳ್ತಂಗಡಿಯಲ್ಲಿ ತಹಶೀಲ್ದಾರ್ ಆಗಿದ್ದ ಪೃಥ್ವಿ ಸಾನಿಕಂ ಇತ್ತೀಚೆಗೆ ದ.ಕ ಜಿಲ್ಲೆಯ ಮೂಲ್ಕಿ ತಹಶೀಲ್ದಾರ್ ಆಗಿ ವರ್ಗಾವಣೆಯಾಗಿದ್ದರು. ತೆರವಾದ ಸ್ಥಾನಕ್ಕೆ ಇದೀಗ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ವಿಶೇಷ ತಹಶೀಲ್ದಾರ್ ಎಸ್.ಎನ್ ನರಗುಂದ ಅವರನ್ನು ನೇಮಕಗೊಳಿಸಿ ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯ ಅಧೀನ ಕಾರ್ಯದರ್ಶಿ ನರಸಿಂಹ ಮೂರ್ತಿ ಜಿ.ಕೆ ಆದೇಶಿಸಿದ್ದಾರೆ.




