ಬೆಳ್ತಂಗಡಿ; ಜಿಲ್ಲಾ ಮಟ್ಟದಲ್ಲಿ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ನಿಟ್ಟಿನಲ್ಲಿ ಪ್ರತಿ ವಾರ ಜಿಲ್ಲಾ/ತಾಲೂಕು/ ಜಿಲ್ಲಾಮಟ್ಟದ ಅಧಿಕಾರಿಗಳ ನೇತೃತ್ವದಲ್ಲಿ ಹೋಬಳಿ ಮಟ್ಟದ ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ ನೀಡಿದೆ.
ಪ್ರತಿ ವಾರ ಹೋಬಳಿ ಮಟ್ಟದ ಜನಸ್ಪಂದನ ಕಾರ್ಯಕ್ರಮಗಳನ್ನು ನಡೆಸಬೇಕು , ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ , ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಆದೇಶಿಸಿರುವ ರಾಜ್ಯ ಸರ್ಕಾರ , ಜನಸ್ಪಂದನ ಕಾರ್ಯಕ್ರಮದ ಬಗ್ಗೆ ಪ್ಯಾಪಕ ಪ್ರಚಾರ ಕೈಗೊಂಡು , ಕಾರ್ಯಕ್ರಮದಲ್ಲಿ ಸ್ವೀಕರಿಸಿದ ಅರ್ಜಿಗಳನ್ನು ಅದೇ ದಿನ ಸರ್ಕಾರದ ಅಧಿಕೃತ ಪೋರ್ಟಲ್ ನಲ್ಲಿ ಅಪ್ಲೋಡ್ ಮಾಡಬೇಕು ಎಂದು ಆದೇಶಿಸಿದೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ತಿಂಗಳಲ್ಲಿ ಕಡ್ಡಾಯವಾಗಿ ಎರಡು ಬಾರಿ ಜಿಲ್ಲೆಗಳಿಗೆ ಕಡ್ಡಾಯವಾಗಿ ಭಾಗವಹಿಸಬೇಕು ಮತ್ತು ಆ ಸಂದರ್ಭದಲ್ಲಿ ನಡೆಯುವ ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸಿ ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು ಎಂದು ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸುಬೋಧ್ ಯಾದವ್ ರವರು ಆದೇಶಿಸಿದ್ದಾರೆ.










