Home ಅಪರಾಧ ಲೋಕ ಬಂಟ್ವಾಳ; ಅಪ್ರಾಪ್ತ ಬಾಲಕಿ ಮೇಲೆ ಮಚ್ಚಿನಿಂದ ಹಲ್ಲೆ ಆರೋಪಿ ಬಂಧನ

ಬಂಟ್ವಾಳ; ಅಪ್ರಾಪ್ತ ಬಾಲಕಿ ಮೇಲೆ ಮಚ್ಚಿನಿಂದ ಹಲ್ಲೆ ಆರೋಪಿ ಬಂಧನ

0

ಬಂಟ್ವಾಳ; ಕಾಲೇಜಿಗೆ ಹೋಗಲು ಬಸ್ ಕಾಯುತ್ತಿದ್ದ ಅಪ್ರಾಪ್ತ ಬಾಲಕಿಯ ಮೇಲೆ ಯುವಕನೋರ್ವ ಮಚ್ಚಿನಿಂದ ಹಲ್ಲೆ ನಡೆಸಿದ ಘಟನೆ ಸೋಮವಾರ ನಡೆದಿದ್ದು ಗಾಯಾಳು ಬಾಲಕಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚೇತರಿಸಿಕೊಳ್ಳುತ್ತಿದ್ದಾಳೆ‌ ಆರೋಪಿ ಜವ್ವಾರ್ (28) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.


ಸೋಮವಾರ ಬೆಳಗ್ಗೆ ಸಮಯ ಸುಮಾರು 08.45 ಗಂಟೆಗೆ ಅಪ್ರಾಪ್ತ ಬಾಲಕಿಯು (17) ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಬಂಟ್ವಾಳ ಮೊಂತಿಮಾರು ಬಸ್ ನಿಲ್ದಾಣದ ಬಳಿ ಕಾಲೇಜಿಗೆ ತೆರಳುವರೇ ನಿಂತಿದ್ದಾಗ, ಸ್ಥಳಕ್ಕೆ ಬಂದ ಆರೋಪಿ ಬಂಟ್ವಾಳ ಮಂಚಿ ನಿವಾಸಿ ಮೊಹಮ್ಮದ್ ಜವ್ವಾರ್ (28) ಎಂಬಾತನು ಮಚ್ಚಿನಿಂದ ಬಾಲಕಿಯ ತಲೆ ಹಾಗೂ ಕೈಗೆ ಹಲ್ಲೆ ಮಾಡಿರುತ್ತಾನೆ. ಕೃತ್ಯ ನಡೆಸಿದ ಬಳಿಕ ಆರೋಪಿಯು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದದಾನೆ , ಬಾಲಕಿಯು ದೇರಳಕಟ್ಟೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿರುವುದಾಗಿದೆ. ಪ್ರಸ್ತುತ ಬಾಲಕಿ ಪ್ರಾಣಾಪಾಯದಿಂದ ಪಾರಾಗಿದ್ದು, ಆರೋಪಿಯ ವಿಚಾರಣೆ ನಡೆಸಿ ಮುಂದಿನ ಕಾನೂನುಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ತಿಳಿಸಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

Exit mobile version