
ಬೆಳ್ತಂಗಡಿ: ರಾಷ್ಟ್ರೀಯ ಹೆದ್ದಾರಿಯಲ್ಲಿ ಮುಂಡಾಜೆ ಗ್ರಾಮದ ಸೀಟ್ ಕಾಡ್ ಬಳಿ ಗುರುವಾರ ಬೆಳಿಗ್ಗೆ ಎರಡು ಕಾರುಗಳ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಗಾಯಗೊಂಡಿದ್ದು ಎರಡೂ ವಾಹನಗಳು ನುಜ್ಜುಗುಜ್ಜಾಗಿದೆ.
ಜು. 9 ರಂದು ಬೆಳಿಗ್ಗೆ ಚಾರ್ಮಾಡಿ-ಉಜಿರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗುತ್ತಿದ್ದ ಎರಡು ಕಾರುಗಳು ಸೀಟ್ ಕಾಡ್ ಬಳಿ ಪರಸ್ಪರ ಡಿಕ್ಕಿ ಹೊಡೆದಿವೆ. ಅಪಘಾತದ ತೀವ್ರತೆಗೆ ಎರಡೂ ಕಾರುಗಳು ನಜ್ಜುಗುಜ್ಜಾಗಿವೆ.
ಈ ಅಪಘಾತದಲ್ಲಿ ಕಾರುಗಳಲ್ಲಿದ್ದ ಆರು ಮಂದಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಮಂಗಳೂರು ಕಾವೂರು ಮೂಲದವರಾದ ವಿನಿತಾ (22), ಗೌರಮ್ಮ (49) ಮತ್ತು ಕೊಟ್ರೆಗೌಡ (55) ಯಾದಗಿರಿ ಜಿಲ್ಲೆಯ ಸುರಪುರ ಮೂಲದವರಾದ ಭೀಮಣ್ಣ (65), ಶ್ರೀನಿವಾಸ (32) ಮತ್ತು ಶಶಿಧರ (33) ಎಂಬವರು ಗಾಯಗೊಂಡವರಾಗಿದ್ದು
ಅಪಘಾತದ ನಂತರ ಸ್ಥಳೀಯರು ಕೂಡಲೇ ರಕ್ಷಣಾ ಕಾರ್ಯದಲ್ಲಿ ನೆರವಾಗಿದ್ದು
ಗಾಯಾಳುಗಳನ್ನು ತಕ್ಷಣವೇ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಪ್ರಯಾಣಿಕರೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ










