
ಬೆಳ್ತಂಗಡಿ : ತಹಶೀಲ್ದಾರ್ ಪೃಥ್ವಿ ಸಾನಿಕಂ ವರ್ಗಾವಣೆಯಾದ ಜಾಗಕ್ಕೆ ಹೊಸ ತಹಶೀಲ್ದಾರ್ ಆಗಿ ಎಸ್.ಎನ್.ನರಗುಂದ ಅವರನ್ನು ಸರಕಾರ ನೇಮಕ ಮಾಡಿ ಜು.2 ರಂದು ಆದೇಶ ಹೊರಡಿಸಿತ್ತು.
ಇದೀಗ ಮೈಸೂರು ಜಿಲ್ಲೆಯ ಅಭಿವೃದ್ಧಿ ಪ್ರಾಧಿಕಾರದ ವಿಶೇಷ ಗ್ರೇಡ್-1 ತಹಶೀಲ್ದಾರ್ ಆಗಿರುವ ಎಸ್.ಎನ್.ನರಗುಂದ ಅವರು ಬೆಳ್ತಂಗಡಿ ತಹಶೀಲ್ದಾರ್ ಕಚೇರಿಯಲ್ಲಿ ಜು.9 ರಂದು ಅಧಿಕಾರ ಸ್ವೀಕರಿಸಿಕೊಂಡರು.
ಈ ಹಿಂದೆ ಮೈಸೂರು ಜಿಲ್ಲೆಯ ಸಾಲಿಗ್ರಾಮ, ಹೆಚ್. ಡಿ. ಕೋಟೆ ಹಾಗೂ ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸಿದ್ದರು.