Home ಸ್ಥಳೀಯ ಸಮಾಚಾರ ಅತಿ ಹಿಂದುಳಿದ ಮಠಾಧೀಶರ ಮಹಾಸಭೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೆಂಬಲ

ಅತಿ ಹಿಂದುಳಿದ ಮಠಾಧೀಶರ ಮಹಾಸಭೆಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬೆಂಬಲ

4
0

ಬೆಳ್ತಂಗಡಿ: ಇತ್ತೀಚಿನ ದಿನಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಹಾಗೂ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಹಿನ್ನೆಲೆಯಲ್ಲಿ ಅತಿ ಹಿಂದುಳಿದ ಮಠಾಧೀಶರ ಮಹಾಸಭೆ (ರಿ.) ಕೋರ್ ಕಮಿಟಿಯ ಸದಸ್ಯರಾದ ಸ್ವಾಮೀಜಿಗಳು ಧರ್ಮಸ್ಥಳಕ್ಕೆ ಜು.10 ರಂದು ಭೇಟಿ ನೀಡಿ, ನಾವು ಧರ್ಮಸ್ಥಳದ ಜೊತೆ ಇದ್ದೇವೆ ಎಂದು ಬೆಂಬಲ ಸೂಚಿಸಿ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಬೆಂಬಲ ಪತ್ರ ನೀಡಿದೆ.
ಅವರು ನೀಡಿರುವ ಪತ್ರದಲ್ಲಿ ರಾಜ್ಯದ ಎಲ್ಲಾ ಹಿಂದುಳಿದ ಮಠಾಧೀಶರು ಸೇರಿದಂತೆ ಅನೇಕ ನಾಗರಿಕರು ಧರ್ಮಸ್ಥಳದ ಪರವಾಗಿ ನಿಂತಿದ್ದೇವೆ ಎಂದು ಉಲ್ಲೇಖಿಸಲಾಗಿದೆ. ಧರ್ಮಸ್ಥಳದ ಪರವಾಗಿ ಅಧಿಕೃತ ಬೆಂಬಲ ವ್ಯಕ್ತಪಡಿಸಿ ಮುಂದಿನ ಕ್ರಮಗಳ ಕುರಿತು ಚರ್ಚಿಸಲಾಗುವುದು ಎಂದು ತಿಳಿಸಲಾಗಿದೆ.

ಬೆಂಬಲ ಪತ್ರ ನೀಡುವಾಗ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರಾದ ಕಲ್ಬುರ್ಗಿಯ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠ ಪ್ರಣವಾನಂದ ಮಹಾಸ್ವಾಮೀಜಿ, ಉಪಾಧ್ಯಕ್ಷರಾದ ಕುಂಬಾರ ಸಮುದಾಯದ ಬಸವ ಮೂರ್ತಿ ಕುಂಬಾರ ಗುಂಡಯ್ಯ ಸ್ವಾಮೀಜಿ, ಲಂಬಾಣಿ ಮತ್ತುಬಂಜಾರ ಸಮುದಾಯದ ತರಿಕೆರೆಯ ಮಂಜು ಮಹಾರಾಜ್ ಸ್ವಾಮೀಜಿ, ಶಿವಸಂಬಿ ಸಮುದಾಯದ ಮಹಂತು ದೇವ್ ಸ್ವಾಮೀಜಿ, ಬೋವಿ ಸಮುದಾಯದ ಸ್ವಾಮೀಜಿಗಳು ವಾಲ್ಮೀಕಿ ಸಮುದಾಯದ ಪ್ರಕಾಶಾನಂದ ಮಹಾರಾಜ್ ಸ್ವಾಮೀಜಿಗಳು ಜೊತೆಗಿದ್ದರು.

LEAVE A REPLY

Please enter your comment!
Please enter your name here