Home ಅಪರಾಧ ಲೋಕ ಮಂಗಳೂರು; ಕಟ್ಟಡ ನಿರ್ಮಾಣ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಎಂಟು ಮಂದಿ ಬಾಂಗ್ಲಾದೇಶಿ ಅಕ್ರಮ ವಲಸಿಗರು ಪೊಲೀಸ್...

ಮಂಗಳೂರು; ಕಟ್ಟಡ ನಿರ್ಮಾಣ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಎಂಟು ಮಂದಿ ಬಾಂಗ್ಲಾದೇಶಿ ಅಕ್ರಮ ವಲಸಿಗರು ಪೊಲೀಸ್ ವಶಕ್ಕೆ

2
0

ಮಂಗಳೂರು; ನಗರದಲ್ಲಿ ಕಟ್ಟಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದ ಎಂಟು ಮಂದಿ ಬಾಂಗ್ಲಾದೇಶ ಪ್ರಜೆಗಳನ್ನು ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದೆ.
ನಗರ ಕಮೀಷನರೇಟ್ ನ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲವು ಬಾಂಗ್ಲಾದೇಶದ ಪ್ರಜೆಗಳು ಇರುವ ಬಗ್ಗೆ ಖಚಿತ ಮಾಹಿತಿಯಂತೆ ಸುರತ್ಕಲ್ ಪೊಲೀಸ್ ಠಾಣಾ ಪೊಲೀಸರು ದಿನಾಂಕ: 09.07.2026 ರಂದು ದಾಳಿ ನಡೆಸಿ ಪರಿಶೀಲಿಸಿದ ಸಮಯ ಒಟ್ಟು 54 ಮಂದಿ ಕಟ್ಟಡ ಕಾರ್ಮಿಕರ ದಾಖಲಾತಿಗಳನ್ನು ಪರಿಶೀಲಿಸಿದ ಸಮಯ ಅಕ್ರಮವಾಗಿ ವಾಸ್ತವ್ಯವಿದ್ದ ಬಾಂಗ್ಲಾದೇಶದ 8 ಮಂದಿ ಪ್ರಜೆಗಳನ್ನು ಪತ್ತೆ ಹಚ್ಚಲಾಗಿರುತ್ತದೆ.
ಮುಕ್ತಾರ್ ಆಲಿ
ರಾಕಿಬುರ್ ಹುಸೈನ್
ಅಜರುಲ್ ಇಸ್ಲಾಂ(36),
ಝಾಹಿದ್ ಹುಸೈನ್(18)
ಬೆಲಾಹುಸೈನ್ (36),

ಹಸಿಬುಲ್ ಹಸನ್ (37),

ಸಮೀವುಲ್ ಹಸನ್ (23), ಸೆಯಿಬುರ್ ರಹಮಾನ್
ಎಂಬವರೆ ಪೊಲೀಸ್ ವಶದಲ್ಲಿರುವ ಬಾಂಗ್ಲಾದೇಶಿ ಪ್ರಜೆಗಳಾಗುದ್ದಾರೆ.
ಈ ಮೇಲ್ಕಾಣಿಸಿದ ಬಾಂಗ್ಲಾದೇಶದ ಪ್ರಜೆಗಳು ಸುಮಾರು 3 ತಿಂಗಳ ಹಿಂದೆ ಅಕ್ರಮವಾಗಿ ಬಾಂಗ್ಲಾದೇಶದಿಂದ ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಮೂಲಕ ಭಾರತಕ್ಕೆ ಬಂದು ನಂತರ ಮುರ್ಷಿದಾಬಾದ್ ನ ಪಶ್ಚಿಮ ಬಂಗಾಳದ ವಿಳಾಸವಿರುವ ಆಧಾರ್ ಕಾರ್ಡ್ ಗಳಿಗೆ ಮೇಲ್ಕಂಡ ಬಾಂಗ್ಲಾದೇಶ ನಿವಾಸಿಗಳ ಭಾವಚಿತ್ರವನ್ನು ಅಂಟಿಸಿ ಕಲರ್ ಜೆರಾಕ್ಸ್ ನ್ನು ಮಾಡಿ 2 ತಿಂಗಳಿನಿಂದ ದಕ್ಷಿಣ ಕನ್ನಡ ಜಿಲ್ಲೆಯ ಮುಕ್ಕಕ್ಕೆ ಬಂದು ಕಟ್ಟಡ ನಿರ್ಮಾಣ ಕಾರ್ಯದಲ್ಲಿ ತೊಡಗಿರುವುದಾಗಿ ತಿಳಿದುಬಂದಿರುತ್ತದೆ.
ಸದ್ರಿ ಬಾಂಗ್ಲಾ ಪ್ರಜೆಗಳನ್ನು ಠಾಣೆಗೆ ಕರೆತಂದು ಕೂಲಂಕಷವಾಗಿ ಪರಿಶೀಲನೆಯನ್ನು ಮಾಡಿ ಅವರ ಗುರುತಿನ ಚೀಟಿಯಾದ NATIONAL ID CARD, ಜನನ ಪ್ರಮಾಣ ಪತ್ರ ಹಾಗೂ ಅವರ ಕುಟುಂಬದವರ ದಾಖಲಾತಿಗಳನ್ನು ಪರಿಶೀಲಿಸಿದಾಗ ಇವರು ಬಾಂಗ್ಲಾದೇಶ ನಿವಾಸಿಗಳೆಂದು ದೃಢಪಟ್ಟಿರುತ್ತದೆ. ಮತ್ತು ಅವರುಗಳು ಇಲ್ಲಿಗೆ ಕೂಲಿ ಕೆಲಸವನ್ನು ಮಾಡಲು ಬಂದಿರುವುದಾಗಿ ತಿಳಿದುಬಂದಿರುತ್ತದೆ. ಸದ್ರಿ ಬಾಂಗ್ಲಾದೇಶ ನಿವಾಸಿಗಳು ಯಾವುದೇ ರಹದಾರಿ ಪತ್ರ, ವೀಸಾ ಅನ್ನು ಪಡೆಯದೇ ಅಕ್ರಮವಾಗಿ ಭಾರತದ ಗಡಿಯನ್ನು ದಾಟಿ ನುಸುಳಿ ಬಂದಿರುವುದಾಗಿದೆ ಅಕ್ರಮವಾಗಿ ನುಸುಳಿ ಭಾರತ ದೇಶವನ್ನು ಪ್ರವೇಶಿಸಿ ದ ಮೇಲ್ಕಾಣಿಸಿದ ಬಾಂಗ್ಲಾದೇಶದ ಪ್ರಜೆಗಳನ್ನು ಮುಂದಿನ ಕ್ರಮದ ಬಗ್ಗೆ ವಿದೇಶಿಯರ ಪ್ರಾದೇಶಿಕ ನೊಂದಣಿ ಕಛೇರಿ ಬೆಂಗಳೂರು ರವರಿಗೆ ವರದಿಯನ್ನು ನಿವೇದಿಸಲಾಗಿದೆ.
ಅಕ್ರಮವಾಗಿ ನುಸುಳಿ ಭಾರತ ದೇಶವನ್ನು ಪ್ರವೇಶಿಸಿದ ಮೇಲ್ಕಾಣಿಸಿದ ಬಾಂಗ್ಲಾದೇಶದ ಪ್ರಜೆಗಳನ್ನು ಪತ್ತೆ ಮಾಡುವಲ್ಲಿ ಮಂಗಳೂರು ಉತ್ತರ ಉಪವಿಭಾಗದ ಸಹಾಯಕ ಪೊಲೀಸ್ ಆಯುಕ್ತರವರಾದ ಶ್ರೀ ಶ್ರೀಕಾಂತ್ ರವರ ನೇತ್ರತ್ವದಲ್ಲಿ, ಸುರತ್ಕಲ್ ಪೊಲೀಸ್ ನಿರೀಕ್ಷಕರವರಾದ ಶ್ರೀ ಪ್ರಮೋದ್ ಕುಮಾರ್, ಪಿಎಸ್ಐ ರಘು ನಾಯಕ, ಠಾಣಾ ಸಿಬ್ಬಂದಿಗಳಾದ ಎ.ಎಸ್.ಐ ರಾಜೇಶ್ ಆಳ್ವ, ತಿರುಪತಿ ಅಳ್ಳೊಳ್ಳಿ, ಉಮೇಶ್, ರಾಜೇಂದ್ರ ಪ್ರಸಾದ್, ಕಾರ್ತಿಕ್, ವಿನೋದ್ ಕುಮಾರ್, ಸತೀಶ್ ಸತ್ತಿಗೇರಿ, ಸಂತೋಷ್ ಮತ್ತು ಓಂಪ್ರಕಾಶ್ ಬಿಂಗಿರವರು ಭಾಗವಹಿಸಿರುತ್ತಾರೆ.

LEAVE A REPLY

Please enter your comment!
Please enter your name here