Home ಸ್ಥಳೀಯ ಸಮಾಚಾರ ಬೆಳ್ತಂಗಡಿ: ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಪುಸ್ತಕ ವಿತರಣೆ

ಬೆಳ್ತಂಗಡಿ: ರಾಜಕೇಸರಿ ಸೇವಾ ಟ್ರಸ್ಟ್ ವತಿಯಿಂದ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಪುಸ್ತಕ ವಿತರಣೆ

0
2

ಬೆಳ್ತಂಗಡಿ: ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಇದರ ವತಿಯಿಂದ, ರಾಜ ಕೇಸರಿ ಸೇವಾ ಟ್ರಸ್ಟ್ ಕರ್ನಾಟಕ ಇದರ ಸಂಸ್ಥಾಪಕರಾದ ದೀಪಕ್ ಜಿ. ಬೆಳ್ತಂಗಡಿ ಇವರ ನೇತೃತ್ವದಲ್ಲಿ 586ನೇ ಸೇವಾ ಯೋಜನೆಯಿಂದ ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಯ ಆಯ್ದ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣಾ ಕಾರ್ಯಕ್ರಮ ಕುತ್ಯಾರು ಹೊಸಮನೆ ಸಪರಿವಾರ ನಾಗಬ್ರಹ್ಮಾದಿ ಕ್ಷೇತ್ರ ರೆಂಕೆದಗುತ್ತುನಲ್ಲಿ ಜು.12ರಂದು ನಡೆಯಿತು.
ಅಧ್ಯಕ್ಷತೆಯನ್ನು ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಜಗದೀಶ್ ಲಾಯಿಲ ವಹಿಸಿದರು.
ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್‌ ಸುವರ್ಣ ಉದ್ಘಾಟನೆ ನೆರವೇರಿಸಿ ರಾಜಕೇಸರಿ ಟ್ರಸ್ಟ್ ನಿಂದ ನಡೆಯುತ್ತಿರುವ ಮಾದರಿ ಕಾರ್ಯಕ್ರಮಕ್ಕೆ‌ ಅಭಿನಂದನೆ ಸಲ್ಲಿಸಿದರು.


ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಡಿ ವೈ ಎಸ್ ಪಿ ರೋಹಿನಿ‌ ಆಗಮಿಸಿ ಶುಭ ಹಾರೈಸಿದರು. ಧಾರ್ಮಿಕ ಮುಖಂಡ ಕಿರಣ್ ಚಂದ್ರ ಡಿ ಪುಷ್ಪಗಿರಿ, ಉದ್ಯಮಿ ಹಳ್ಳಿ ಮನೆ ಮಾಲಕರಾದ ಪ್ರವೀಣ್‌ ಫೆರ್ನಾಂಡಿಸ್, ಉಜಿರೆ, ಬೆಳ್ತಂಗಡಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷರಾದ ತುಕರಾಮ್ ಬಿ., ಬಳಂಜ ಶಿಕ್ಷಣ ಟ್ರಸ್ಟ್ ಅಧ್ಯಕ್ಷರಾದ ಮನೋಹರ ಬಳಂಜ, ಜ್ಯೂಸ್ ಜಂಕ್ಷನ್ ಮಾಲಕರದ ದಿನೇಶ್‌ ಶೆಟ್ಟಿ, ಕುತ್ಯಾರು ಹೊಸಮನೆ ಸಪರಿವಾರ ನಾಗಬ್ರಹ್ಮಾದಿ ಕ್ಷೇತ್ರ ಮುಖ್ಯಸ್ಥರಾದ ಸಂಜೀವ ಮೂಲ್ಯ ಸಂಗಮ್ ಸ್ಟೋ‌ರ್ ರೆಂಕೆದಗುತ್ತು ಮಾಲಕ ಸಿರಿಲ್‌ ಡಿಸೋಜ, ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ಪ್ರಧಾನ ಕಾರ್ಯದರ್ಶಿ ಶರತ್ ಕರಾಯ ಉಪಸ್ಥಿತರಿದ್ದರು.

ರಾಜ ಕೇಸರಿ ಸೇವಾ ಟ್ರಸ್ಟ್ ಬೆಳ್ತಂಗಡಿ ಉಪಾಧ್ಯಕ್ಷರಾದ ಸಂದೀಪ್ ಸ್ವಾಗತಿಸಿ, ಲೋಹಿತ್ ಕಾರ್ಯಕ್ರಮ ನಿರೂಪಿಸಿದರು. ಸರಕಾರಿ ಶಾಲೆಯ 350ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್‌ ವಿತರಿಸಲಾಯಿತು.

NO COMMENTS

LEAVE A REPLY

Please enter your comment!
Please enter your name here