Home ಅಪರಾಧ ಲೋಕ ಬೆಳ್ತಂಗಡಿ: ದಿಡುಪೆ ಜಲಪಾತ ನೋಡಲು ಬಂದ ಯುವತಿಗೆ ಜೀವ ಬೆದರಿಕೆ ಐವರ ವಿರುದ್ದ ಪ್ರಕರಣ ದಾಖಲು

ಬೆಳ್ತಂಗಡಿ: ದಿಡುಪೆ ಜಲಪಾತ ನೋಡಲು ಬಂದ ಯುವತಿಗೆ ಜೀವ ಬೆದರಿಕೆ ಐವರ ವಿರುದ್ದ ಪ್ರಕರಣ ದಾಖಲು

0
3

ಬೆಳ್ತಂಗಡಿ; ದಿಡುಪೆಯ ಜಲಪಾತ ನೋಡಲು ಮಂಗಳೂರಿನಿಂದ ಬಂದಿದ್ದ ಯುವಕ ಹಾಗೂ ಯುವತಿಗೆ ರಸ್ತೆಯಲ್ಲಿ ತಡೆದು ಜೀವಬೆದರಿಕೆ ಹಾಕಿರುವ ಬಗ್ಗೆ ಯುವತಿ ನೀಡಿದ ದೂರಿನಂತೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ದಿಡುಪೆ ನಿವಾಸಿಗಳಾದ ರಂಜಿತ್, ಸುದರ್ಶನ್, ಸ್ವಸ್ತಿಕ್, ಪ್ರದೀಪ್, ದೀಕ್ಷಿತ್‌ಹಾಗೂ ಇತರರ ವಿರುದ್ದ ಪ್ರಕರಣ‌ ದಾಖಲಿಸಲಾಗಿದೆ.
ಮಂಗಳೂರಿನಿಂದ ಯುವತಿ ತನ್ನ ಸ್ನೇಹಿತ ಫರ್ಹಾನ್ ನೊಂದಿಗೆ ಜಲಪಾತ ನೋಡಲು ಜು.12 ರಂದು ದಿಡುಪೆಗೆ ಬರುತ್ತಾಳೆ ಅರಣ್ಯ ಇಲಾಖೆಯ ಚೆಕ್ ಪೋಸ್ಟ್ ನಲ್ಲಿ ಅನುಮತಿ ಪಡೆದು ಜಲಪಾತಕ್ಕೆ ತೆರಳಿ ಹಿಂತಿರುಗಿ ಬಂದ ವೇಳೆ‌ ಯುವತಿಯನ್ನು ತಡೆದ ಸ್ಥಳೀಯ ಯುವಕರ ತಂಡವೊಂದು ನೀನು ಮುಸ್ಲಿಮನೊಟ್ಟಿಗೆ ಯಾಕೆ ಬಂದಿದ್ದೀಯ ನಿನಗೆ ಹಿಂದೂಗಳು ಆಗುವುದಿಲ್ಲವಾ ಎಂದು ಅವಾಚ್ಯವಾಗಿ ನಿಂದಿಸಿ ನಿನ್ನೊಂದಿಗೆ ಬಂದಿದ್ದ ಯುವಕನನ್ನು ಇಲ್ಲಿಗೆ ಕರೆಸು ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ ಎಂದು ಜೀವಬೆದರಿಕೆ ಹಾಕಿದ್ದಾರೆ ಎಂದು ದೂರು ನೀಡಲಾಗಿದೆ. ಯುವತಿಯ ದೂರಿನಂತೆ ಪೊಲೀಸರು ಭಾರತೀಯ ದಂಡ ಸಂಹಿತೆ 126(2), 352, 351(2) ಸೆಕ್ಷನ್ ಗಳ ಅಡಿಯಲ್ಲಿ ಪ್ರಕರಣ‌ ದಾಖಲಿಸಿಕೊಂಡಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

NO COMMENTS

LEAVE A REPLY

Please enter your comment!
Please enter your name here