Home ಅಪರಾಧ ಲೋಕ ಮಂಗಳೂರು ನಾಲ್ವರು ಅಪ್ರಾಪ್ತರು ಸೇರಿದಂತೆ‌ 11 ಮಂದಿ ಬಂಗ್ಲಾ ಪ್ರಜೆಗಳು ಪೊಲೀಸ್ ವಶಕ್ಕೆ

ಮಂಗಳೂರು ನಾಲ್ವರು ಅಪ್ರಾಪ್ತರು ಸೇರಿದಂತೆ‌ 11 ಮಂದಿ ಬಂಗ್ಲಾ ಪ್ರಜೆಗಳು ಪೊಲೀಸ್ ವಶಕ್ಕೆ

3
0

ಮಂಗಳೂರು; ನಗರದ ಉರ್ವಾ ಪೊಲೀಸ್‌ ಠಾಣೆ ವ್ಯಾಪ್ತಿಯ ಕಟ್ಟಡ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ, ಅಕ್ರಮವಾಗಿ ಭಾರತ ಪ್ರವೇಶಿಸಿ ಕೆಲಸ ಮಾಡುತ್ತಿದ್ದ 11 ಮಂದಿ ಬಾಂಗ್ಲಾದೇಶದ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ.
ಇವರಲ್ಲಿ ನಾಲ್ವರು ಅಪ್ರಾಪ್ತರೂ ಸೇರಿದ್ದಾರೆ. ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾಗ ಅಕ್ರಮ ಬಾಂಗ್ಲಾ ವಲಸಿಗರು ಪತ್ತೆಯಾಗಿದ್ದಾರೆ. ಇದರೊಂದಿಗೆ, ಕಳೆದ ಕೆಲವು ದಿನಗಳಲ್ಲಿ ಮಂಗಳೂರಿನಲ್ಲಿ ಪತ್ತೆಯಾದ ಅಕ್ರಮ ಬಾಂಗ್ಲಾ ವಲಸಿಗರ ಸಂಖ್ಯೆ 17ಕ್ಕೆ ಏರಿಕೆಯಾದಂತಾಗಿದೆ.

ಬಂಧಿತರನ್ನು ಎಂ.ಡಿ. ಕೌಸರ್ ಅಲಿ, ಎಂ.ಡಿ. ನೂ‌ರ್ ಅಮೀನ್‌, ಎಂ.ಡಿ. ನಾಹಿದುಲ್ ಇಸ್ಲಾಂ, ಹುಮಾಯೂನ್ ಕಬೀರ್, ರೊಮ್ಹಾನ್ ಅಲಿ, ಅಬ್ದುಲ್ ರಹಮಾನ್ ರೊಯೆಲ್ ಹಾಗೂ ನೋಯಾನ್ ಎಂದು ಗುರುತಿಸಲಾಗಿದೆ. ಉಳಿದ ನಾಲ್ವರು ಅಪ್ರಾಪ್ತರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.

ಆರೋಪಿಗಳು ಅಕ್ರಮವಾಗಿ ಭಾರತಕ್ಕೆ ನುಸುಳಿ, ಪಶ್ಚಿಮ ಬಂಗಾಳದ ನಕಲಿ ವಿಳಾಸಗಳನ್ನು ಬಳಸಿಕೊಂಡು ಮಂಗಳೂರಿಗೆ ಬಂದು ಕೂಲಿ ಕೆಲಸ ಮಾಡುತ್ತಿದ್ದರು ಎಂಬುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಕಾರ್ಯಾಚರಣೆಯ ವೇಳೆ

ಬಂಧಿತರ ಬಳಿಯಿಂದ ಬಾಂಗ್ಲಾದೇಶದ ರಾಷ್ಟ್ರೀಯ (National ID Card), ಜನನ ಪ್ರಮಾಣಪತ್ರ ಹಾಗೂ ಕುಟುಂಬಕ್ಕೆ ಸಂಬಂಧಿಸಿದ ಇತರ ದಾಖಲೆಗಳು ಪತ್ತೆಯಾಗಿವೆ. ಈ ದಾಖಲೆಗಳ ಆಧಾರದ ಮೇಲೆ ಅವರು ಬಾಂಗ್ಲಾದೇಶದ ನಿವಾಸಿಗಳೇ ಎಂಬುದನ್ನು
ಪೊಲೀಸರು ಪರಿಶೀಲಿಸುತ್ತಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಅಕ್ರಮ ಬಂಗ್ಲಾ ವಲಸಿಗರ‌ಬಗ್ಗೆ ಪೊಲೀಸರು ಹೆಚ್ಚಿನ ಪರಿಶೀಲನೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here