
ಬೆಳ್ತಂಗಡಿ : ಧರ್ಮಸ್ಥಳ ಪ್ ಪ್ರಕರಣದಲ್ಲಿ ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯಕ್ಕೆ ಇದೀಗ ಅಂತಿಮ ವರದಿಯನ್ನು ಸಲ್ಲಿಕೆ ಮಾಡಿದ್ದಾರೆ.
ಬೆಳ್ತಂಗಡಿ ಎಸ್ಐಟಿ ಅಧಿಕಾರಿಗಳು ಧರ್ಮಸ್ಥಳ ಪ್ರಕರಣದಲ್ಲಿ 20-11-2025 ರಂದು BNS (u/s-215) ಅಡಿಯಲ್ಲಿ ಸಿ.ಎನ್.ಚಿನ್ನಯ್ಯ, ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್.ಟಿ, ವಿಠಲ್ ಗೌಡ, ಸುಜಾತಾ ಭಟ್ ವಿರುದ್ಧ 3,923 ಪುಟಗಳ ‘ಸುಳ್ಳು ಸಾಕ್ಷ್ಯ’ (Perjury Report) ವರದಿಯನ್ನು ಸಲ್ಲಿಕೆ ಮಾಡಿದ್ದರು.
ಈ ವರದಿಯನ್ನು ಒಪ್ಪಲು ನ್ಯಾಯಾಲಯ ನಿರಾಕರಿಸಿ ಅಂತಿಮ ವರದಿ ನೀಡುವಂತೆ ಸೂಚಿಸಿತ್ತು. ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ನ್ಯಾಯಾಲಯದ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಶಶಾಂಕ್ ನಾಗೇಂದ್ರ ಭಟ್ ಮುಂದೆ ಜು.15 ರಂದು 3 ಗಂಟೆಗೆ ಎಸ್ಐಟಿ ಮೊದಲಿನ 3,923 ಮತ್ತು ಈಗಿನ 3,082 ಸೇರಿ ಈವರೆಗೆ ತನಿಖೆಯ ಸಂಪೂರ್ಣ ಒಟ್ಟು 7005 ಪುಟಗಳ ಅಂತಿಮ ವರದಿಯನ್ನು 12 ಫೈಲ್ ಗಳನ್ನು ಮಾಡಿ ಸಲ್ಲಿಕೆ ಮಾಡಿದ್ದಾರೆ.
ಎಸ್ಐಟಿ ಎಸ್ಪಿ ಸಿ.ಎ.ಸೈಮನ್, ಇನ್ಸ್‌ಪೆಕ್ಟರ್ ಕುಸುಮಾಧರ್, ಇನ್ಸ್‌ಪೆಕ್ಟರ್ ಮಂಜುನಾಥ್ ಹಾಗೂ ಸಿಬ್ಬಂದಿ ನ್ಯಾಯಾಲಯದಲ್ಲಿ ಹಾಜರಿದ್ದರು. ಪ್ರಕರಣದ ಆರೋಪಿ ಚಿನ್ನಯ್ಯ ಕೂಡ ನ್ಯಾಯಾಲಯದಲ್ಲಿ ಹಾಜರಾಗಿದ್ದಾರೆ.










