
ಬೆಳ್ತಂಗಡಿ : ಬಿಸಿರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಯುವತಿ ಲಾವಣ್ಯ ಅವರನ್ನು ಭೀಕರವಾಗಿ ಹತ್ಯೆಗೈದು ಪರಾರಿಯಾಗಿದ್ದ ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ನಿವಾಸಿ ಚೇತನ್‌ನನ್ನು ಬಂಟ್ವಾಳ ಪೊಲೀಸರು ಬಂಧಿಸಿದ್ದಾರೆ. ಆದರೆ ಈ ವೇಳೆಗೆ ಆತ ಇಲಿಪಾಷಣ ಸೇವಿಸಿದ್ದ ಎನ್ನಲಾಗಿದ್ದು ಆತನನ್ನು ಇದೀಗ ಪೊಲೀಸರು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆರೋಪಿಯ ಪತ್ತೆಗಾಗಿ ವಿಶೇಷ ತಂಡಗಳನ್ನು ರಚಿಸಿದ್ದ ಪೊಲೀಸರು ತ್ವರಿತ ಕಾರ್ಯಾಚರಣೆ ನಡೆಸಿ ಇಂದು ಬೆಳಗ್ಗೆ ಆರೋಪಿಯನ್ನು ಪತ್ತೆಹಚ್ಚಿದ್ದರು ಈ ವೇಳೆ ಆತ ವಿಷ ಸೇವಿಸಿದ್ದ ಸ್ಥಿತಿಯಲ್ಲಿದ್ದ ಎನ್ನಲಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಆತನ ಆರೋಗ್ಯಾ ಸ್ಥಿತಿ ಬಗ್ಗೆ ಹೆಚ್ಚಿನ ಮಾಹಿತಿಗಳು ತಿಳಿದು ಬರಬೇಕಾಗಿದೆ.









