Home ಅಪರಾಧ ಲೋಕ ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿ ಗರ್ಭಿಣಿ ಪ್ರಕರಣ; ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

ಬೆಳ್ತಂಗಡಿ : ಅಪ್ರಾಪ್ತ ಬಾಲಕಿಯ ಅತ್ಯಾಚಾರ ಮಾಡಿ ಗರ್ಭಿಣಿ ಪ್ರಕರಣ; ಆರೋಪಿಯನ್ನು ಬಂಧಿಸಿದ ಬೆಳ್ತಂಗಡಿ ಪೊಲೀಸರು

0

ಬೆಳ್ತಂಗಡಿ: ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ ಗರ್ಭಿಣಿಯಾಗಿರುವ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ 16 ವರ್ಷದ ಅಪ್ರಾಪ್ತ ಕಾಲೇಜ್ ವಿದ್ಯಾರ್ಥಿಯನ್ನು  ಉಪ್ಪಿನಂಗಡಿ ನಿವಾಸಿ ಶುಭರಾಜ್(28) ಎಂಬಾತ ಪುಸಲಾಯಿಸಿ ಬಲವಂತವಾಗಿ ಅತ್ಯಾಚಾರ ಮಾಡಿ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದ. ಬಾಲಕಿ ಹೊಟ್ಟೆ ನೋವು ಕಾಣಿಸಿಕೊಂಡಿದ್ದರಿಂದ ತಾಯಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪರೀಕ್ಷೆ ಮಾಡಿದಾಗ ಬಾಲಕಿ 5-6 ತಿಂಗಳ ಗರ್ಭಿಣಿಯಾಗಿದ್ದಾಳೆ‌ ಎಂದು ತಿಳಿದುಬಂದಿದೆ. ಈ ಬಗ್ಗೆ ಬಾಲಕಿ ತಾಯಿ ನೀಡಿದ ದೂರಿನ ಜು.18 ರಂದು ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದರು.

ತನಿಖೆ ನಡೆಸಿದ ಬೆಳ್ತಂಗಡಿ ಪೊಲೀಸರು ಆರೋಪಿ ಶುಭರಾಜ್(28) ನನ್ನು ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ಪುತ್ರಬೈಲಿನಲ್ಲಿ ಜು‌.19 ರಂದು ಸಂಜೆ ಬಂಧಿಸಿ ವಿಚಾರಣೆ ನಡೆಸಿ ಜು.20 ರಂದು ಮಂಗಳೂರು ಪೋಕ್ಸೋ ನ್ಯಾಯಾಲಯಕ್ಕೆ ಆರೋಪಿಯನ್ನು ಹಾಜರುಪಡಿಸಿದ್ದು.ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

NO COMMENTS

LEAVE A REPLY

Please enter your comment!
Please enter your name here

Exit mobile version