Home ಅಪಘಾತ ಬಂಟ್ವಾಳ; ಶಾಲಾ ಬಸ್ ಮೇಲೆ‌ ಮರ ಬಿದ್ದು ವಿದ್ಯಾರ್ಥಿ ಮೃತ್ಯು

ಬಂಟ್ವಾಳ; ಶಾಲಾ ಬಸ್ ಮೇಲೆ‌ ಮರ ಬಿದ್ದು ವಿದ್ಯಾರ್ಥಿ ಮೃತ್ಯು

2
0

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಲ್ಲೆಟ್ಟಿ ಸಮೀಪ ಖಾಸಗಿ ಶಾಲೆಯ ಬಸ್‌ ಮೇಲೆ ಬೃಹತ್ ಗಾತ್ರದ ಮರ ಏಕಾಏಕಿ ಉರುಳಿಬಿದ್ದ ಪರಿಣಾಮ ಒಬ್ಬ ವಿದ್ಯಾರ್ಥಿನಿ ಮೃತಪಟ್ಟು ಹಲವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ. ಈ ಪೈಕಿ ಇಬ್ಬರು ಗಂಭೀರವಾಗಿವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ.
ಕಲ್ಲಡ್ಕದ ಖಾಸಗಿ ಶಾಲೆಗೆ ಸೇರಿದ ಬಸ್ ವಿದ್ಯಾರ್ಥಿಗಳನ್ನು ಕರೆದುಕೊಂಡು ಸಂಚರಿಸುತ್ತಿದ್ದ ವೇಳೆ ರಸ್ತೆ ಬದಿಯಲ್ಲಿದ್ದ ಬೃಹತ್ ಮರ ಏಕಾಏಕಿ ಬಸ್ ಮೇಲೆ ಉರುಳಿಬಿದ್ದಿದೆ. ಮರ ಬಿದ್ದ ರಭಸಕ್ಕೆ ಬಸ್‌ನ ಮೇಲ್ಬಾಗಕ್ಕೆ ಹಾನಿಯಾಗಿದ್ದು, ಒಳಗಿದ್ದ ವಿದ್ಯಾರ್ಥಿಗಳಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿವೆ.

LEAVE A REPLY

Please enter your comment!
Please enter your name here